ಪಂಚಮಸಾಲಿ ಮೀಸಲಾತಿಗಾಗಿ ಪಂಚಮಸಾಲಿ ಶಾಸಕರು ಸಾಮೂಹಿಕ ರಾಜೀನಾಮೆ ನೀಡಬೇಕು ಎಂದು ಕಾಗವಾಡ ಕಾಂಗ್ರೆಸ್ ಶಾಸಕ ರಾಜುಕಾಗೆ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಆರ್ಥಿಕವಾಗಿ ಮತ್ತು ಶೈಕ್ಷಣಿಕವಾಗಿ ಹಿಂದುಳಿದ ಪಂಚಮಸಾಲಿ ಮೀಸಲಾತಿಗಾಗಿ ದಶಕಗಳಿಂದ ಹೋರಾಟ ನಡೆಸಿದರು ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಸರ್ಕಾರದ ಮೇಲೆ ಒತ್ತಡ ಹಾಕಲು ಪಂಚಮಸಾಲಿ ಶಾಸಕರು ಸಾಮೂಹಿಕವಾಗಿ ರಾಜೀನಾಮೆ ನೀಡಲು ನಿರ್ಧರಿಸಬೇಕು. ಇಂತಹ ಕಠಿಣ ಕ್ರಮ ಕೈಗೊಂಡರೆ ಸರ್ಕಾರ ಖಂಡಿತವಾಗಿಯೂ ಈ ಬಗ್ಗೆ ಗಮನ ಹರಿಸುತ್ತದೆ. ಇತಿಹಾಸ ಸೃಷ್ಟಿಸಲು ಶಾಸಕರು ತಮ್ಮ ಸಮುದಾಯಕ್ಕಾಗಿ ತ್ಯಾಗ ಮಾಡಬೇಕು ಎಂದು ಚಿಕ್ಕೋಡಿಯಲ್ಲಿ ಶಾಸಕ ರಾಜುಕಾಗೆ ಕರೆ ಕೊಟ್ಟಿದ್ದಾರೆ.