ಸರ್ಕಾರದ ಸೂಚನೆ ಮೇರೆಗೆ ರಾಜ್ಯಾದ್ಯಂತ ತಾಲೂಕು ಆಡಳಿತದಿಂದ ರೂಲ್ಸ್ ಜಾರಿ ಆಗ್ತಿದ್ದು, ಫೋರ್ ವೀಲರ್ ವೆಹಿಕಲ್ ಇರುವವರಿಗೆ ಇನ್ಮುಂದೆ ಅಂತ್ಯೋದಯ ಅಥವಾ ಬಿಪಿಎಲ್ ಕಾರ್ಡ್ ಸಿಗುವುದಿಲ್ಲ. ನಾಲ್ಕು ಚಕ್ರದ ವಾಹನ ಇದ್ದು ಅಂತ್ಯೋದಯ, BPL ಕಾರ್ಡ್ ಇದ್ದರೆ ವಾಪಸ್ ನೀಡುವಂತೆ ಸೂಚನೆ ನೀಡಲಾಗಿದೆ.
ಸರ್ಕಾರದ ಆದೇಶದ ಮೇರೆಗೆ ತಾಲೂಕು ಆಡಳಿತದಿಂದ ಅಂತ್ಯೋದಯ, ಬಿಪಿಎಲ್ ಕಾರ್ಡ್ ದಾರರಿಗೆ ಖಡಕ್ ಎಚ್ಚರಿಕೆ ನೀಡಲಾಗಿದ್ದು, ತಕ್ಷಣವೇ ಅಂತ್ಯೋದಯ, BPL ಕಾರ್ಡ್ ವಾಪಸ್ ನೀಡುವಂತೆ ಸೂಚನೆ ನೀಡಲಾಗಿದೆ. ವಾಪಸ್ ನೀಡದಿದ್ದರೆ ಕಾನೂನು ಕ್ರಮದ ಜೊತೆ ದಂಡದ ಎಚ್ಚರಿಕೆಯನ್ನು ನೀಡಲಾಗಿದ್ದು, ತಾಲೂಕು ಕಚೇರಿ, ಆಹಾರ ಖಾತೆಗೆ ಕಾರ್ಡ್ ವಾಪಸ್ ನೀಡುವಂತೆ ಸೂಚನೆ ನೀಡಲಾಗಿದೆ. ಇದರೊಂದಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲೇ 52 ಸಾವಿರದ 200 ಕಾರ್ಡ್ ರದ್ದಾಗುವ ಸಾಧ್ಯತೆ ಇದೆ.
ಕಳೆದ ತಿಂಗಳು ಅನರ್ಹ ಪಡಿತರದಾರರ ಪಟ್ಟಿಯನ್ನು ಸರ್ಕಾರ ಬಿಡುಗಡೆ ಮಾಡಿತ್ತು, ಭಾರೀ ವಿರೋಧದ ನಡುವೆಯೂ ನಾಲ್ಕು ಚಕ್ರದ ವಾಹನ ಇರುವವರ ಪಡಿತರ ಕಾರ್ಡ್ ರದ್ದು ಮಾಡಲಾಗಿದೆ. ಅಲ್ಲದೇ, ಸರ್ಕಾರಿ ನೌಕರರು, ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಸಲ್ಲಿಕೆ ಮಾಡುತ್ತಿರುವವರು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 3 ಹೆಕ್ಟೇರ್ ಭೂಮಿ, ನಗರ ಪ್ರದೇಶದಲ್ಲಿ 1000 ಚದರ ಅಡಿಗಿಂತಲೂ ವಿಸ್ತಾರವಾದ ಮನೆ ಹೊಂದಿರುವವರ ಕಾರ್ಡ್ ರದ್ದಾಗಲಿದೆ.
ಇದನ್ನು ಓದಿ : ಡಿಸಿಎಂ ಡಿ.ಕೆ.ಶಿವಕುಮಾರ್ಗೆ ಮತ್ತೆ ಸಿಬಿಐನಿಂದ ಸಂಕಷ್ಟ..!
ಇದರೊಂದಿಗೆ ವಾರ್ಷಿಕ ಆದಾಯ 1 ಲಕ್ಷದ 20 ಸಾವಿರ ಇರುವವರ ಪಡಿತರ ಕಾರ್ಡ್ ರದ್ದು ಆಗಲಿದ್ದು, ಕಾರ್ಡ್ ವಾಪಸ್ ನೀಡದೆ ಇದ್ದರೆ ಅಗತ್ಯ ವಸ್ತುಗಳ ಕಾಯ್ದೆ 1955, IPC ಅಡಿ ಕಾನೂನು ಕ್ರಮದ ಜೊತೆ ದಂಡದ ಎಚ್ಚರಿಕೆ ನೀಡಲಾಗಿದೆ. ನಾಲ್ಕು ಚಕ್ರದ ವಾಹನ ಇರುವವರ ಪಡಿತರ ರದ್ದು ವಿಚಾರವಾಗಿ ಭಾರೀ ವಿರೋಧ ವ್ಯಕ್ತವಾಗಿತ್ತು. ವಿರೋಧದ ನಡುವೆಯೂ ಅಂತ್ಯೋದಯ, BPL ಕಾರ್ಡ್ ಪರಿಷ್ಕರಣೆಗೆ ಸರ್ಕಾರ ಮುಂದಾಗಿದ್ದು, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ತಹಶೀಲ್ದಾರರ ನೇತೃತ್ವದಲ್ಲಿ ನೋಟಿಸ್ ಜಾರಿ ಮಾಡಲಾಗಿದೆ.
ಆದರೆ, ನಾಲ್ಕು ಚಕ್ರದ ವಾಹನದ ಬಗ್ಗೆ ಸ್ಪಷ್ಟನೆ ನೀಡಲಾಗಿದ್ದು, ಜೀವನೋಪಾಯಕ್ಕಾಗಿ ಸ್ವತಃ ಓಡಿಸುವ ಒಂದು ವಾಣಿಜ್ಯ ವಾಹನವನ್ನು ಅಂದರೆ ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು ಹೊಂದಿದ ಕುಟುಂಬವನ್ನು ಹೊರತುಪಡಿಸಿ, ನಾಲ್ಕು ಚಕ್ರದ ವಾಹನಗಳನ್ನು ಹೊಂದಿರುವ ಎಲ್ಲಾ ಕುಟುಂಗಳಿಗೂ ಈ ನಿಯಮ ಅನ್ವಯ ಆಗಲಿದೆ.