- ವಿಧಾನ ಪರಿಷತ್ ಟಿಕೆಟ್ ಘೋಷಣೆ ಹಿನ್ನೆಲೆ ಸಿ.ಟಿ.ರವಿಗೆ ಭವ್ಯ ಸ್ವಾಗತ
- ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ ಎಂದ ಸಿ.ಟಿ ರವಿ
- ನಾಳೆ ಬೆಂಗಳೂರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ
ಚಿಕ್ಕಮಗಳೂರು : ವಿಧಾನ ಪರಿಷತ್ ಟಿಕೆಟ್ ಘೋಷಣೆ ಹಿನ್ನೆಲೆ ನಗರದಲ್ಲಿ ಮಾಜಿ ಸಚಿವ ಸಿ.ಟಿ.ರವಿಗೆ ಭವ್ಯ ಸ್ವಾಗತ ಕೋರಿದ್ದಾರೆ. ನಗರಕ್ಕೆ ಬರುತ್ತಿದ್ದಂತೆ ಪಟಾಕಿ ಸಿಡಿಸಿ ಸಂಭ್ರಮಿಸಿದ್ದಾರೆ. ಹಿರೇಮಗಳೂರು ಸಮೀಪ ಸಿ.ಟಿ.ರವಿ ಪರ ಘೋಷಣೆ ಕೂಗಿದ್ದಾರೆ.
ಟಿಕೆಟ್ ಘೋಷಣೆಯಾಗುತ್ತಿದ್ದಂತೆ ಪ್ರತಿಕ್ರಿಯಿಸಿದ ಅವರು, 95ನೇ ಇಸವಿಯಿಂದ ನಾನು ಯಾವುದನ್ನು ಕೇಳಿ ಪಡೆದಿಲ್ಲ. ಪಕ್ಷದ ಕೆಲಸ ಮಾಡುವುದಷ್ಟೇ ನನ್ನ ಕೆಲಸ. ನನಗೇನು ಬೇಕು ಅದನ್ನ ಪಕ್ಷ ನಿರ್ಧಾರ ಮಾಡುತ್ತೆ. ರಾಷ್ಟ್ರ ಹಾಗೂ ರಾಜ್ಯ ನಾಯಕರಿಗೆ ಅಭಿನಂದನೆ ಸಲ್ಲಿಸುತ್ತೇನೆ. ನಾಳೆ ಮತದಾನ ಮಾಡಿ ಬೆಂಗಳೂರಿಗೆ ತೆರಳಿ ನಾಮಪತ್ರ ಸಲ್ಲಿಸುತ್ತೇನೆ ಎಂದು ಖುಷಿ ವ್ಯಕ್ತಪಡಿಸಿದ್ದಾರೆ.
ವಿಧಾನಸಭೆಯಲ್ಲಿ ಸೋತ ರವಿಗೆ ಮತ್ತೊಂದು ಚಾನ್ಸ್ ನೀಡಲಾಗಿದೆ. ಸಂತೋಷ್ ಬಣದಲ್ಲಿ ಗುರುತಿಸಿಕೊಂಡಿರುವ ಅವರು, ಶಿಷ್ಯನಿಗೆ ಟಿಕೆಟ್ ಕೊಡಿಸುವಲ್ಲಿ ಸಂತೋಷ್ ಯಶಸ್ವಿಯಾಗಿದ್ದಾರೆ. ಸಿ.ಟಿ ರವಿ, ಎನ್.ರವಿಕುಮಾರ್, ಎಂ.ಜಿ. ಮುಲೆಗೆ ಟಿಕೆಟ್ ನೀಡಲಾಗಿದೆ. ಬಿಜೆಪಿ ಹೈಕಮಾಂಡ್ನಿಂದ ಅಭ್ಯರ್ಥಿಗಳ ಘೋಷಣೆಯಾಗಿದೆ.