ಚಿಕ್ಕಮಗಳೂರು ತಾಲ್ಲೂಕಿನ ಸೀತಾಳಯ್ಯನಗಿರಿ, ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಲ್ಲಿ ಗುಡ್ಡ ಕುಸಿದಿರುವುದು ಮತ್ತು ರಸ್ತೆಯ ಮೇಲ್ಮೈಗೆ ತೀವ್ರವಾದ ಹಾನಿಯಾಗಿರುವುದರಿಂದ ವಾಹನಗಳ ಸಂಚಾರವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ. ಸೀತಾಳಯ್ಯನಗಿರಿ ಮತ್ತು ಮುಳ್ಳಯ್ಯನಗಿರಿಗೆ ಹೋಗುವ ರಸ್ತೆಯಲ್ಲಿ ಸ್ಥಳೀಯ ನಿವಾಸಿಗಳ ವಾಹನಗಳು, ಅಂಬುಲೆನ್ಸ್, ಅಗ್ನಿಶಾಮಕ ವಾಹನ, ಪೊಲೀಸ್ ವಾಹನಗಳು ಮತ್ತು ತುರ್ತು ಕಾರ್ಯ ನಿರ್ವಹಿಸುವ ಇತರೆ ಸರ್ಕಾರಿ ಇಲಾಖೆಗಳ ವಾಹನಗಳ ಸಂಚಾರಕ್ಕೆ ಮಾತ್ರ ಅನುಮತಿ ನೀಡಲಾಗಿದೆ.
ಜುಲೈ 15 ರಿಂದ ಚಿಕ್ಕಮಗಳೂರು ತಾಲ್ಲೂಕಿನ ಸೀತಾಳಯ್ಯನಗಿರಿ-ಮುಳ್ಳಯ್ಯನಗಿರಿ ಪ್ರದೇಶದಲ್ಲಿ ಅತೀ ಹೆಚ್ಚು ಮಳೆ ಬೀಳುತ್ತಿದ್ದು, ಈ ರಸ್ತೆಯ ಮೇಲೆ ಅಲ್ಲಲ್ಲಿ ಗುಡ್ಡ ಕುಸಿದಿದೆ. ಅತೀ ಮಳೆಯಿಂದಾಗಿ ರಸ್ತೆಯ ಮೇಲ್ಮೈಗೆ ತೀವ್ರವಾದ ಹಾನಿಯಾಗಿರುತ್ತದೆ. ಈ ರಸ್ತೆಯಲ್ಲಿ ವಾಹನಗಳ ಸಂಚಾರ ಅಪಾಯಕಾರಿ ಆಗಿರುವುದರಿಂದ ಸೀತಾಳಯ್ಯನಗಿರಿ ಹಾಗೂ ಮುಳ್ಳಯ್ಯನಗಿರಿಗೆ ಹೋಗುವ ರಸ್ತೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗುವವರೆಗೆ ವಾಹನ ಸಂಚಾರವನ್ನು ಪ್ರಯಾಣಿಕರ ಸುರಕ್ಷತೆಯ ಹಿತದೃಷ್ಟಿಯಿಂದ ನಿರ್ಬಂಧಿಸಲಾಗಿದೆ.