- ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಿ.ವೈ ವಿಜಯೇಂದ್ರ
- ರೇಣುಕಾಸ್ವಾಮಿ ಕುಟುಂಬಕ್ಕೆ 2 ಲಕ್ಷ ರೂ.ಗಳ ಧನಸಹಾಯ ನೀಡಿದ ವಿಜಯೇಂದ್ರ
ಚಿತ್ರದುರ್ಗ: ನಟ ದರ್ಶನ್ ಗ್ಯಾಂಗ್ನಿಂದ ಹತ್ಯೆಯಾದ ಚಿತ್ರದುರ್ಗದ ರೇಣುಕಾ ಸ್ವಾಮಿ ನಿವಾಸಕ್ಕೆ ಇಂದು ಪ್ರತಿಪಕ್ಷ ನಾಯಕ ಬಿ.ವೈ ವಿಜಯೇಂದ್ರ ಭೇಟಿ ನೀಡಿದ್ದು, ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ವಿಜಯೇಂದ್ರ ಅವರು ರೇಣುಕಾಸ್ವಾಮಿ ಕುಟುಂಬಕ್ಕೆ 2 ಲಕ್ಷ ರೂ.ಗಳ ಧನಸಹಾಯ ನೀಡಿದ್ದಾರೆ.
ರೇಣುಕಾ ಸ್ವಾಮಿ ಕೊಲೆ ಅಮಾನವೀಯ ಕೃತ್ಯ. ನಾಗರಿಕ ಸಮಾಜದ ಇದನ್ನು ಬೆಂಬಲಿಸಲು ಸಾಧ್ಯ ಇಲ್ಲ. ಪ್ರತಿಯೊಬ್ಬರೂ ಘಟನೆಯನ್ನು ಅತ್ಯುಗ್ರವಾಗಿ ಖಂಡಿಸಬೇಕು. ಅವರ ಕುಟುಂಬ ನೋಡಿ ದುಃಖ ಆಗುತ್ತಿದೆ. ಆ ಕುಟುಂಬಕ್ಕೆ ಧೈರ್ಯ ತುಂಬುವ ಕೆಲಸ ಆಗಬೇಕು. ರೇಣುಕಾ ಸ್ವಾಮಿ ಪತ್ನಿ 4 ತಿಂಗಳ ಗರ್ಭಿಣಿ. ಅವರಿಗೆ ಸರ್ಕಾರಿ ಉದ್ಯೋಗ ಜೊತೆಗೆ ಪರಿಹಾರ ಕೊಡಬೇಕು. ಯಾರೇ ಇದ್ದರೂ ತನಿಖೆ ಸರಿಯಾದ ರೀತಿಯಲ್ಲಿ ಆಗಬೇಕು. ಯಾವ ಒತ್ತಡಕ್ಕೂ ಮಣಿಯದೆ ತಪ್ಪಿತಸ್ಥರಿಗೆ, ಕೊಲೆಗಡುಕರಿಗೆ ಶಿಕ್ಷೆ ಆಗಬೇಕು. ಪ್ರಕರಣದ ಬಗ್ಗೆ ಇಡೀ ದೇಶದಲ್ಲಿ ಚರ್ಚೆ ಆಗುತ್ತಿದ್ದು, ಸರ್ಕಾರ ಗಂಭೀರವಾಗಿ ತೆಗೆದುಕೊಳ್ಳಬೇಕು” ಎಂದು ಬಿ.ವೈ ವಿಜಯೇಂದ್ರ ಹೇಳಿದರು.
“ನಾನು ಇಲ್ಲಿ ರಾಜಕೀಯ ಬೆರೆಸಲು ಹೋಗುವುದಿಲ್ಲ. ಸಿಎಂ ಕೂಡಲೇ ಪರಿಹಾರ ಕೊಡುವ ನಿರ್ಧಾರ ಮಾಡಬೇಕು. ಪಕ್ಷದ ವತಿಯಿಂದ 2 ಲಕ್ಷ ರೂ. ಚೆಕ್ ಕೊಟ್ಟಿದ್ದೇವೆ. ಪರಿಹಾರ ಜೊತೆ ಜೊತೆಗೆ ಸರ್ಕಾರದ ಉದ್ಯೋಗವೂ ಬೇಕಿದೆ” ಎಂದು ತಿಳಿಸಿದರು.