ಕಮಲ್ ಹಾಸನ್ ಅಭಿನಯದ ಇಂಡಿಯನ್ 2 ಸಿನಿಮಾದ ಕ್ರೇಜ್ ದಿನದಿಂದ ದಿನಕ್ಕೆ ಹೆಚ್ಚಾಗಿದೆ. ಈಗಾಗಲೇ ಪೋಸ್ಟರ್ ಮತ್ತು ಟೀಸರ್ ಮೂಲಕ ಕುತೂಹಲ ಹೆಚ್ಚಿಸಿದೆ. ಅಷ್ಟೇ ಅಲ್ಲಾ ಜುಲೈ 12ಕ್ಕೆ ಚಿತ್ರ ವರ್ಲ್ಡ್ ವೈಡ್ ರಿಲೀಸ್ ಆಗ್ತಿರೋದು ಕೂಡ ಕನ್ಫರ್ಮ್ ಆಗಿದೆ..
ಹಾಗಾಗಿ ಸದ್ಯ ಸಿನಿಮಾ ಪ್ರಮೋಷನ್ ಶುರು ಮಾಡಿರೋ ಚಿತ್ರತಂಡ ಸದ್ಯ ಫಸ್ಟ್ ಸಾಂಗ್ ರಿಲೀಸ್ ಮಾಡಿದೆ. ಇಂಡಿಯನ್ 2 ಸಿನಿಮಾದ ಸೌರಾ ಎಂಬ ಹಾಡು ಬಿಡುಗಡೆಯಾಗಿದೆ. ಕುದುರೆ ಏರಿ ಬರುವ ಸೇನಾಪತಿಯ ಸಾಹಸ ಕಥೆಯನ್ನು ವರ್ಣಿಸೋ ಹಾಡು ಇದಾಗಿದೆ.
ಈ ಹಾಡಿಗೆ ಸುದ್ದಲ ಅಶೋಕ್ ತೇಜ ಲಿರಿಕ್ಸ್ ಬರೆದಿದ್ದಾರೆ. ರಿತೇಶ್ ಜಿ ರಾವ್ ಮತ್ತು ಶೃತಿಕಾ ಸಮುದ್ರಾ ಸೌರಾ ದನಿಯಾಗಿದ್ದು, ಅನಿರುದ್ಧ್ ಮ್ಯೂಸಿಕ್ ಮಾಡಿದ್ದಾರೆ. ಸೇನಾಪತಿಯಾಗಿ ಕಮಲ್ ಹಾಸನ್ ಬಣ್ಣ ಹಚ್ಚಿದ್ದಾರೆ.
ಇನ್ನು ಇಂಡಿಯನ್ 1 ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆಯಾಗಿತ್ತು. ಈ ಸಿನಿಮಾದಲ್ಲಿ ಕಮಲ್ ಹಾಸನ್ ದ್ವಿಪಾತ್ರ ನಿಭಾಯಿಸಿದ್ದರು. ಇದೀಗ ಇಂಡಿಯನ್ 2 ನಲ್ಲಿ ಕಮಲ್ ಹೇಗೆ ಕಾಣಿಸಿಕೊಳ್ಳುತ್ತಾರೆ. ಇಲ್ಲಿಯೂ ಕೂಡ ಡಬಲ್ ರೋಲ್ ನಲ್ಲಿ ಕಾಣಿಸಿಕೊಳ್ಳುತ್ತಾರಾ ಅನ್ನೋ ಕುತೂಹಲ ಹೆಚ್ಚಾಗಿದೆ.
ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಸೇನಾಪಾತಿಯು ಭ್ರಷ್ಟಾಚಾರದ ವಿರುದ್ಧ ಹೋರಾಡುವ ಕಥೆ ಇದಾಗಿದ್ದು, ಕಮಲ್ ಹಾಸನ್ ಜೊತೆಗೆ ಸಿದ್ಧಾರ್ಥ್, ರಕುಲ್ ಪ್ರೀತ್ ಸಿಂಗ್ , ಗುಲ್ಷನ್ ಗ್ರೊವರ್, ವಿವೇಕ್, ಸಮುದ್ರಖನಿ, ಬಾಬಿ ಸಿಂಹ, ಮುಂತಾದವರು ನಟಿಸಿದ್ದಾರೆ. ಇನ್ನು ಚಿತ್ರಕ್ಕೆ ಲೈಕಾ ಪ್ರೊಡಕ್ಷನ್ಸ್ ಮತ್ತು ಉದಯನಿಧಿ ಸ್ಟಾಲಿನ್ ಅವರ ರೆಡ್ ಜೈಂಟ್ ಮೂವೀಸ್ ಬಂಡವಾಳ ಹಾಕಿದೆ.