- ನಟಿ ಸಪ್ತಮಿಗೌಡ ಅವರದ್ದು ಎನ್ನಲಾದ ಆಡಿಯೋ ವೈರಲ್
- ಹೆಂಡ್ತಿ ಬಿಟ್ಟು ಬಾ ಗುರು ಅಂತ ನಾನೇಳಿಲ್ಲ ಎಂದು ಕಣ್ಣೀರಾಕಿದ ಕಾಂತಾರಾ ಲೀಲಾ
ನಟ ಯುವ ರಾಜ್ಕುಮಾರ್, ಶ್ರೀದೇವಿ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಯುವ ರಾಜ್ಕುಮಾರ್ ತಮ್ಮ ಪತ್ನಿ ಶ್ರೀದೇವಿಯಿಂದ ವಿಚ್ಛೇದನ ಬಯಸಿ ಕೌಟುಂಬಿಕ ನ್ಯಾಯಾಲಯದಲ್ಲಿ ಅರ್ಜಿ ಹಾಕಿದ್ದಾರೆ. ಮಾಧ್ಯಮಗಳ ಮುಂದೆ ಯುವ ಪರ ವಕೀಲರು, ಶ್ರೀದೇವಿ ವಿರುದ್ಧ ಹಲವು ಆರೋಪಗಳನ್ನು ಸಹ ಮಾಡಿದ್ದರು. ವಿಚ್ಛೇದನ ಅರ್ಜಿಯಲ್ಲಿ ಅನೈತಿಕ ಸಂಬಂಧದ ಆರೋಪ ಮಾಡಲಾಗಿತ್ತು. ಅದಕ್ಕೆ ಪ್ರತಿಯಾಗಿ ಶ್ರೀದೇವಿ ಕೂಡ ಯುವ ವಿರುದ್ಧ ಅನೈತಿಕ ಸಂಬಂಧದ ಆರೋಪ ಮಾಡಿದ್ದರು. ನಟಿ ಸಪ್ತಮಿ ಗೌಡ ಹೆಸರು ಈ ಪ್ರಕರಣದಲ್ಲಿ ಪ್ರಮುಖವಾಗಿ ಕೇಳಿ ಬಂದಿತ್ತು. ಇದೀಗ ಸಪ್ತಮಿ ಗೌಡ ಅವರದ್ದು ಎನ್ನಲಾದ ಆಡಿಯೋ ಇದೀಗ ವೈರಲ್ ಆಗಿದೆ.
ವೈರಲ್ ಆಗಿರುವ ಆಡಿಯೋ ಮಹಿಳೆಯೊಬ್ಬರು ಅಳುತ್ತಾ ರೆಕಾರ್ಡ್ ಮಾಡಿದ ಆಡಿಯೋ ಆಗಿದೆ. ಧ್ವನಿ ಸಪ್ತಮಿ ಗೌಡ ಅವರ ಧ್ವನಿಯನ್ನು ಹೋಲುತ್ತಿದೆ. ‘ಹೌದು ನನ್ನಿಂದ ಹಲವರಿಗೆ ನೋವಾಗಿದೆ. ನನ್ನದು ತಪ್ಪಿಲ್ಲ ಎಂದು ನಾನು ಹೇಳುವುದಿಲ್ಲ. ಆದರೆ ನಾನು ಗುರು ನಂಬಿ ಮಾಡಿದೆ. ನಿಮ್ಮ ಸೆಟ್ ಅಲ್ಲಿ ಆಗಿದೆ, ಸಾರಿ ಸರ್’ಎಂಬ ಮಾತುಗಳು ಆಡಿಯೋನಲ್ಲಿವೆ. ಈ ಆಡಿಯೋವನ್ನು ಸಪ್ತಮಿ, ವಿಜಯ್ ಕಿರಗಂದೂರು ಅವರಿಗೆ ಕಳಿಸಿದ್ದಾರೆ ಎನ್ನಲಾಗುತ್ತಿದೆ.
‘ಗುರು ಬಂದು ಎಲ್ಲವನ್ನೂ ಹೇಳಿಕೊಂಡ ಮೇಲೆ ನಾನು ಮುಂದುವರೆದೆ. ಅದು ನಿಮ್ಮ ಸೆಟ್ನಲ್ಲಿ ಆಯ್ತು, ಆಗಬಾರದಿತ್ತು, ಬೇಸರವಿದ್ದರೆ ದಯವಿಟ್ಟು ಕ್ಷಮಿಸಿ. ನನ್ನ ಸೈಡ್ ಆಫ್ ದಿ ಸ್ಟೋರಿ ಸಹ ದಯವಿಟ್ಟು ಕೇಳಿಸಿಕೊಳ್ಳಿ. ಯಾವತ್ತಾದರೂ ಸಪ್ತಮಿ ಇಷ್ಟು ಕೆಟ್ಟವಳ ಎಂದು ಅಂದುಕೊಳ್ಳುವ ಮುಂಚೆ ಏನಾಯಿತು ಎಂದು ನನ್ನಿಂದ ಒಮ್ಮೆ ಕೇಳಿಸಿಕೊಳ್ಳಿ’ ಎಂಬ ಮಾತುಗಳು ಆಡಿಯೋನಲ್ಲಿದೆ.
ಆಡಿಯೋ ಲಿಂಕ್ : Latest News of Sapthami Gowda | ನಟಿ ಸಪ್ತಮಿಗೌಡ ಸ್ಫೋಟಕ ಆಡಿಯೋ.? Guarantee News (youtube.com)