- ವೈವಾಹಿಕ ಜೀವನಕ್ಕೆ ಕಾಲಿಟ್ಟ ಸೋನಾಕ್ಷಿ ಸಿನ್ಹಾ
- ಈ ಮದುವೆ ಸ್ಪೆಷಲ್ ಮ್ಯಾರೇಜ್ ಆಕ್ಟ್ ಅಡಿಯಲ್ಲಿ ನಡೆಯಲಿದೆ
ಬಾಲಿವುಡ್ ಖ್ಯಾತ ನಟಿ ಸೋನಾಕ್ಷಿ ಸಿನ್ಹಾ ತನ್ನ ಬಾಯ್ ಫ್ರೆಂಡ್ ಜಹೀರ್ ಇಕ್ಬಾಲ್ ಜೊತೆ ಜೂನ್ 23 ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಸೋನಾಕ್ಷಿ ಮನೆಯವರ ವಿರುದ್ಧವಾಗಿ ವಿವಾಹವಾಗುತ್ತಿದ್ದಾರೆ ಎಂಬ ಅನುಮಾನಗಳನ್ನು ಹುಟ್ಟುಹಾಕಿತ್ತು. ಆದರೆ ಇದೀಗ ಸೋನಾಕ್ಷಿ ಹಾಗೂ ಜಹೀರ್ ಇಕ್ಬಾಲ್ ಇಬ್ಬರೂ ಹಸೆಮಣೆ ಏರಿದ್ದಾರೆ. ಸೋನಾಕ್ಷಿ ಸಿನ್ಹಾ ಮದುವೆಯ ನಂತರ ಇಸ್ಲಾಂ ಧರ್ಮಕ್ಕೆ ಮತಾಂತರ ಆಗಲಿದ್ದಾರೆ ಎಂಬ ಸುದ್ದಿ ಕೇಳಿಬಂದಿತ್ತು.
ಈ ಬಗ್ಗೆ ಜಹೀರ್ ಅವರ ತಂದೆ, ಉದ್ಯಮಿ ಇಟ್ಬಾಲ್ ರತ್ನಾಸಿ ಅವರು ಸ್ಪಷ್ಟನೆ ನೀಡಿದ್ರು, ಈ ಮದುವೆ ಸ್ಪೆಷಲ್ ಮ್ಯಾರೇಜ್ ಆಕ್ಟ್ ಅಡಿಯಲ್ಲಿ ನಡೆಯಲಿದೆ. ಸೋನಾಕ್ಷಿ ಮದುವೆ ಬಳಿಕ ಇಸ್ಲಾಂ ಧರ್ಮಕ್ಕೆ ಮತಾಂತರಗೊಳ್ಳುವುದಿಲ್ಲ. ಈ ಮದುವೆ ಹಿಂದೂ ಅಥವಾ ಮುಸ್ಲಿಂ ಆಚರಣೆಗಳನ್ನು ಹೊಂದಿರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದರಂತೆ ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್ ಇಕ್ಬಾಲ್ ಇಬ್ಬರೂ ರಿಜಿಸ್ಟರ್ ಮ್ಯಾರೆಜ್ ಅಗಿದ್ದಾರೆ. ಇವರ ವಿವಾಹದಲ್ಲಿ ಯಾವುದೇ ಧರ್ಮದ ಶಾಸ್ತ್ರಗಳ ಆಚರಣೆ ಮಾಡಿಲ್ಲ.
ಮದುವೆ ಫೋಟೋಗಳನ್ನು ಸೋನಾಕ್ಷಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಇದೇ ದಿನ, ಏಳು ವರ್ಷಗಳ ಹಿಂದೆ ಪರಸ್ಪರ ಇಬ್ಬರ ಕಣ್ಣುಗಳಲ್ಲಿ, ನಾವು ಪ್ರೀತಿಯನ್ನು ಅದರ ಶುದ್ಧ ರೂಪದಲ್ಲಿ ನೋಡಿದ್ದೇವೆ ಮತ್ತು ಅದನ್ನು ಹಿಡಿದಿಡಲು ನಿರ್ಧರಿಸಿದ್ದೇವೆ. ಇಂದು ಆ ಪ್ರೀತಿಯು ಎಲ್ಲಾ ಸವಾಲುಗಳು ಹಾಗೂ ಗೆಲುವಿನ ಮೂಲಕ ನಮಗೆ ಮಾರ್ಗದರ್ಶನ ನೀಡಿದೆ. ಈ ಕ್ಷಣದವರೆಗೆ ಮುನ್ನಡೆಸಿದೆ. ಅಲ್ಲಿ ನಮ್ಮ ಎರಡೂ ಕುಟುಂಬಗಳು ಮತ್ತು ನಮ್ಮ ಎರಡೂ ದೇವರುಗಳ ಆಶೀರ್ವಾದದೊಂದಿಗೆ. ನಾವು ಈಗ ದಂಪತಿಗಳಾಗಿದ್ದೇವೆ. ಇಲ್ಲಿ ಪ್ರೀತಿ, ಭರವಸೆ ಮತ್ತು ಪರಸ್ಪರ ಸುಂದರವಾಗಿರುವ ಎಲ್ಲಾ ವಿಷಯಗಳು, ಇಂದಿನಿಂದ ಶಾಶ್ವತವಾಗಿ ಇರಲಿದೆ ಎಂದು ಬರೆದುಕೊಂಡಿದ್ದಾರೆ.
ಸೋನಾಕ್ಷಿ ಸಿನ್ಹಾ ಹಾಗೂ ಜಹೀರ್ ಇಕ್ಬಾಲ್ ಮದುವೆಯಾದ ನಂತರ ಮೊದಲ ಬಾರಿಗೆ ಫೋಟೋಸ್ಗೆ ಫೋಸ್ ನೀಡಿದ್ರು. ಸೋನಾಕ್ಷಿ ಕೆಂಪು ರೇಷ್ಮೆ ಸೀರೆಯಲ್ಲಿ ಕಾಣಿಸಿಕೊಂಡರು. ಹಣೆಯಲ್ಲಿ ಸಿಂಧೂರವಿಟ್ಟು, ಕತ್ತಿಗೆ ಚಿನ್ನದ ನೆಕ್ಲೇಸ್, ಕೆಂಪು ಬಳೆಗಳನ್ನು ಧರಿಸಿ ಸೋನಾಕ್ಷಿ ಮಿಂಚಿದ್ರು.