ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ಅವರು ರಾಜ್ಯದ ಅನಿಶ್ಚಿತ ಆರ್ಥಿಕ ಸ್ಥಿತಿಯನ್ನು ಪರಿಗಣಿಸಿ ತಮ್ಮ ಸಂಬಳ ಮತ್ತು ತಮ್ಮ ಕಚೇರಿಗೆ ಹೊಸ ಪೀಠೋಪಕರಣಗಳು ಸೇರಿದಂತೆ ಯಾವುದೇ ವಿಶೇಷ ಭತ್ಯೆಗಳನ್ನು ಸ್ವೀಕರಿಸಲ್ಲ ಎಂದು ಹೇಳಿದ್ದಾರೆ.
ಮೂರು ದಿನಗಳ ಕಾಲ ಸದನಕ್ಕೆ ಹಾಜರಾಗಲು ₹ 35,000 ಸಂಬಳಕ್ಕೆ ಸಂಬಂಧಿಸಿದ ದಾಖಲೆಗಳ ಮೇಲೆ ಸಹಿ ಪಡೆಯಲು ಸೆಕ್ರೆಟರಿಯೇಟ್ನ ಅಧಿಕಾರಿಗಳು ಬಂದಾಗ ಸಂಬಳ ಪಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ. ಸಚಿವರಾದ ಪವನ್ ಕಲ್ಯಾಣ್ ಅವರು ತಮ್ಮ ಖಾತೆಯಾದ ಪಂಚಾಯತ್ ರಾಜ್ ಇಲಾಖೆಗೆ ಸಾಕಷ್ಟು ಹಣದ ಕೊರತೆಯಿದೆ ಎಂದು ಹೇಳಿಕೊಂಡಿದ್ದಾರೆ.