ಮುಂಬೈ: ಬಾಲಿವುಡ್ ನಟಿ ಮಲೈಕಾ ಅರೋರ ತಂದೆ ಅನಿಲ್ ಅರೋರಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ತಮ್ಮ ಅಪಾರ್ಟ್ಮೆಂಟ್ನ 6 ಅಂತಸ್ತಿನ ಕಟ್ಟಡದಿಂದ ಜಿಗಿದು ಸಾವಿಗೆ ಶರಣಾಗಿದ್ದಾರೆ. ಸುದ್ದಿ ತಿಳಿದಿದ್ದೇ ತಡ ಮಲೈಕಾ ಬಾಯ್ಫ್ರೇಂಡ್ ಅರ್ಜುನ್ ಕಪೂರ್ ಓಡೋಡಿ ಬಂದು ಗೆಳತಿಗೆ ಸಾಂತ್ವನ ಹೇಳಿದ್ದಾರೆ.
ಈಗಾಗಲೇ ಘಟನಾ ಸ್ಥಳಕ್ಕೆ ಮುಂಬೈನ ಕ್ರೈಮ್ ಬ್ರಾಂಚ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ಪ್ರಾಥಮಿಕ ಮಾಹಿತಿ ನೀಡಿದ್ದು, ಸ್ಥಳದಲ್ಲಿ ಯಾವುದೇ ಡೆತ್ ನೋಟ್ ಪತ್ತೆಯಾಗಿಲ್ಲ ಎಂದು ತಿಳಿದು ಬಂದಿದೆ. ಮಲೈಕಾ ತಂದೆ ಅನಿಲ್ ಅರೋರಾ ಅವರು ಮಲೈಕಾ ತಾಯಿ ಜಾಯ್ಸ್ ಪಾಲಿಕಾರ್ಪ್ ಡಿವೋರ್ಸ್ ಪಡೆದಿದ್ದರು. ಡಿವೋರ್ಸ್ ಪಡೆದಾಗಿನಿಂದ ಕಿನ್ನತೆಗೆ ಒಳಗಾಗಿದ್ದ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.