ಸಲ್ಮಾನ್ ಖಾನ್ ಮನೆಯ ಮೇಲೆ ಇಬ್ಬರು ಗುಂಡಿನ ದಾಳಿ ಮಾಡಿದ್ದರು. ಮಹಾರಾಷ್ಟ್ರ ಕಂಟ್ರೋಲ್ ಆಫ್ ಆರ್ಗನೈಸ್ಡ್ ಕ್ರೈಮ್ನ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. ಇದರಲ್ಲಿ ವಿಚಾರಣೆಗೆ ಸಂಬಂಧಿಸಿದ ದಾಖಲೆಗಳು ಇವೆ.
ಸಲ್ಮಾನ್ ಖಾನ್ ಮನೆಯ ಮೇಲೆ ನಡೆದ ಗುಂಡಿನ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು 1,735 ಪುಟಗಳ ಚಾರ್ಜ್ಶೀಟ್ ಸಲ್ಲಿಕೆ ಮಾಡಿದ್ದಾರೆ. ಈ ಪ್ರಕರಣದಲ್ಲಿ 9 ಮಂದಿಯನ್ನು ಆರೋಪಿಗಳನ್ನಾಗಿ ಮಾಡಲಾಗಿದೆ. ಈ ಪೈಕಿ ಆರು ಮಂದಿ ಅರೆಸ್ಟ್ ಆಗಿದ್ದು, ಇನ್ನು ಮೂವರಿಗಾಗಿ ಹುಡುಕಾಟ ನಡೆದಿದೆ. ಏಪ್ರಿಲ್ ತಿಂಗಳಲ್ಲಿ ಸಲ್ಮಾನ್ ಖಾನ್ ಅವರ ಮುಂಬೈನ ಬಾಂದ್ರಾದಲ್ಲಿರುವ ಗ್ಯಾಲಾಕ್ಸಿ ಅಪಾರ್ಟ್ಮೆಂಟ್ ಮೇಲೆ ಇಬ್ಬರು ಬೈಕ್ನಲ್ಲಿ ಬಂದು ಗುಂಡಿನ ದಾಳಿ ಮಾಡಿದ್ದರು. ಈ ಪ್ರಕರಣದಲ್ಲಿ ಗ್ಯಾಂಗ್ಸ್ಟರ್ ಲಾರೆನ್ಸ್ ಬಿಷ್ಣೋಯ್ ಹೆಸರು ಕೇಳಿ ಬಂದಿದೆ.
ಮಹಾರಾಷ್ಟ್ರ ಕಂಟ್ರೋಲ್ ಆಫ್ ಆರ್ಗನೈಸ್ಡ್ ಕ್ರೈಮ್ನ ವಿಶೇಷ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಕೆ ಆಗಿದೆ. ಇದರಲ್ಲಿ ವಿಚಾರಣೆಗೆ ಸಂಬಂಧಿಸಿದ ದಾಖಲೆಗಳು ಇವೆ. ಸಾಕ್ಷಿ ಹೇಳಿದ 46 ಮಂದಿ ಹಾಗೂ ಅವರ ಸ್ಟೇಟ್ಮೆಂಟ್ ಪಡೆದಿರುವ ವಿಚಾರ ಇದೆ. 22 ಪಂಚನಾಮೆಗಳು, ತಾಂತ್ರಿಕ ಸಾಕ್ಷಿಗಳು ಚಾರ್ಜ್ಶೀಟ್ ದಾಖಲೆಗಳಲ್ಲಿ ಇವೆ. ಈ ದೋಷಾರೋಪ ಪಟ್ಟಿಯನ್ನು ಕೋರ್ಟ್ ಕೂಲಂಕುಷವಾಗಿ ಪರಿಶೀಲಿಸಲಿದೆ. ಆ ಬಳಿಕ ಮುಂದಿನ ಕ್ರಮದ ಬಗ್ಗೆ ಕೋರ್ಟ್ ನಿರ್ಧಾರ ಮಾಡಲಿದೆ.