ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ ಅವರ ತಂದೆ ಹಾಗೂ ಹೆಸರಾಂತ ಚಿತ್ರಕಥೆಗಾರ ಸಲೀಂ ಖಾನ್ ಅವರಿಗೆ ಜೀವ ಬೆದರಿಕೆ ಹಾಕಲಾಗಿದೆ. ಮುಂಜಾನೆ ವಾಯು ವಿಹಾರದ ವೇಳೆಯಲ್ಲಿ ಸ್ಕೂಟರ್ನಲ್ಲಿ ವ್ಯಕ್ತಿಯೊಬ್ಬರೊಂದಿಗೆ ಬಂದ ಬುರ್ಕಾಧಾರಿ ಮಹಿಳೆಯೊಬ್ಬರು ನಿಮ್ಮನ್ನು ಲಾರೆನ್ಸ್ ಬಿಷ್ಣೋಯಿ ಹತ್ತಿರ ಕಳುಹಿಸುತ್ತೇನೆ ಎಂದು ಬೆದರಿಕೆ ಹಾಕಿದ್ದರು.
ಸಲ್ಮಾನ್ ಖಾನ್ ಅವರ ಬಾಂದ್ರಾ ನಿವಾಸಕ್ಕೆ ಬಿಷ್ಣೋಯಿ ಗ್ಯಾಂಗ್ ಗುಂಡು ಹಾರಿಸಿದ ಕೆಲ ತಿಂಗಳ ನಂತರ ಈ ಘಟನೆ ನಡೆದಿದೆ. ಜೈಲಿನಲ್ಲಿರುವ ಗ್ಯಾಂಗ್ ಸ್ಟರ್ ಲಾರೆನ್ಸ್ ಬಿಷ್ಣೋಯಿ ಹೆಸರು ಹೇಳಿ, ಬುರ್ಕಾಧಾರಿ ಮಹಿಳೆ ಸಲೀಂ ಖಾನ್ ಅವರಿಗೆ ಬೆದರಿಕೆ ಹಾಕಿದ್ದರು. ಈ ಸಂಬಂಧ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.