ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಸೀಸನ್ 5ಕ್ಕೆ ನಿವೇದಿತಾ ಗೌಡ ಎಂಟ್ರಿ ಕೊಟ್ಟಿದ್ದರು. ಅಂದಿನಿಂದ ಇಂದಿನವರೆಗೂ ನಿವೇದಿತಾ ಗೌಡ ತಮ್ಮ ರೀಲ್ಸ್ ವಿಡಿಯೋಗಳ ಮೂಲಕ ಸಖತ್ ಸುದ್ದಿಯಲ್ಲಿ ಇದ್ದರು. ಬಿಗ್ಬಾಸ್ ಸೀಸನ್ 5ಕ್ಕೆ ಕನ್ನಡ ರಾಪರ್, ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಎಂಟ್ರಿ ಕೊಟ್ಟಿದ್ದರು.
ಬಿಗ್ಬಾಸ್ಗೆ ಎಂಟ್ರಿ ಕೊಟ್ಟ ಬಳಿಕ ಈ ಇಬ್ಬರು ತುಂಬಾ ಆತ್ಮೀಯರಾಗಿ ಜೊತೆಗೆ ಇರುತ್ತಿದ್ದರು. ಎಲ್ಲ ರೀತಿಯ ವಿಚಾರಗಳ ಬಗ್ಗೆ ಚರ್ಚೆ ಮಾಡುತ್ತಿದ್ದರು. ಹೀಗಾಗಿ ನಿವೇದಿತಾ ಗೌಡ ಹಾಗೂ ಚಂದನ್ ಶೆಟ್ಟಿ ಇಬ್ಬರಲ್ಲಿ ದಿನ ಕಳೆದಂತೆ ಆ ಸ್ನೇಹ ಪ್ರೀತಿಗೆ ತಿರುಗಿತು. ಹೀಗಾಗಿ ಬಿಗ್ಬಾಸ್ ಶೋನಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಸ್ಪರ್ಧಿಸಿದ್ದರು. ಬಿಗ್ಬಾಸ್ ಶೋ ಮುಕ್ತಾಯಗೊಳ್ಳುತ್ತಿದ್ದಂತೆ 2019ರಂದು ಮೈಸೂರು ದಸರಾ ಈವೆಂಟ್ನಲ್ಲೇ ಬಹಿರಂಗವಾಗಿ ನಿವೇದಿತಾ ಗೌಡಗೆ ಚಂದನ್ ಶೆಟ್ಟಿ ಲವ್ ಪ್ರಪೋಸ್ ಮಾಡಿದ್ದರು.
ಈ ವಿಚಾರ ದೇಶವ್ಯಾಪಿ ಆಕ್ರೋಶಕ್ಕೆ ಕಾರಣವಾಯಿತು. ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಚಂದನ್ ಶೆಟ್ಟಿ ಸಾರ್ವಜನಿಕವಾಗಿ ನಿವೇದಿತಾ ಗೌಡಗೆ ಲವ್ ಪ್ರಪೋಸ್ ಮಾಡಿ ಸಖತ್ ಕಾಂಟ್ರೋವರ್ಸಿ ಮಾಡಿಕೊಂಡಿದ್ದರು. ಆದರೆ ಇದಾದ ಬಳಿಕ ಈ ಇಬ್ಬರು ಬಹಳ ಅದ್ಧೂರಿಯಾಗಿ ಗುರು ಹಿರಿಯರ ಸಮ್ಮುಖದಲ್ಲಿ 2020ರ ಫೆಬ್ರವರಿ ತಿಂಗಳಿನಲ್ಲಿ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅದ್ಧೂರಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಇನ್ನು ಇನ್ಸ್ಟಾಗ್ರಾಮ್ ಖಾತೆಯಲ್ಲಿ ಈ ಇಬ್ಬರು ಸಖತ್ ರೀಲ್ಸ್ ಮಾಡುತ್ತಿದ್ದರು.
ಆದರೆ ಮದುವೆಯಾಗಿ ನಾಲ್ಕು ವರ್ಷದ ಬಳಿಕ ಈ ಇಬ್ಬರು ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲು ಮುಂದಾಗಿದ್ದಾರೆ. ಈ ಸಂಬಂಧ ವಿಚ್ಛೇದನಕ್ಕಾಗಿ ಕೋರ್ಟ್ ಮೆಟ್ಟಿಲೇರಿದ್ದಾರೆ. ಇನ್ನು ಈ ಮುಂದೆ 6 ದಿನಗಳ ಹಿಂದೆ ಕೂಡ ಖಾಸಗಿ ಕಾರ್ಯಕ್ರಮವೊಂದರಲ್ಲಿ ಒಟ್ಟಿಗೆ ಕಾಣಿಸಿಕೊಂಡಿದ್ದರು. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರೂ ಒಟ್ಟಿಗೆ ಸಿನಿಮಾ ಕೂಡ ಮಾಡಿದ್ದರು. ಮೊದಲ ಬಾರಿಗೆ ಕ್ಯಾಂಡಿ ಕ್ರಷ್ ಸಿನಿಮಾದಲ್ಲಿ ಒಟ್ಟಿಗೆ ನಟಿಸಿದ್ದರು. ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆದರೆ ಈ ವಿಚಾರ ಅಭಿಮಾನಿಗಳಿಗೆ ತಿಳಿಯುತ್ತಿದ್ದಂತೆ ಶಾಕ್ ಆಗಿದ್ದಾರೆ.