ಮೈನೆ ಪ್ಯಾರ್ ಕಿಯಾ ಸಿನಿಮಾ ನಾಯಕಿ ಭಾಗ್ಯಶ್ರೀಯವರ ಪುತ್ರಿ ಅವಂತಿಕಾ ದಸ್ಸಾನಿ ಕನ್ನಡಕ್ಕೆ ಎಂಟ್ರಿಕೊಡ್ತಿದ್ದಾರೆ. ಇವರನ್ನ ಸ್ಯಾಂಡಲ್ವುಡ್ಗೆ ಪರಿಚಯಿಸ್ತಿರೋರು ನಿರ್ದೇಶಕ ನಾಗಶೇಖರ್ ಅವರು. ಯಸ್, ಸಂಜು ವೆಡ್ಸ್ ಗೀತಾ, ಮೈನಾ ಸೇರಿದಂತೆ ಹಲವು ಸೂಪರ್ ಹಿಟ್ ಸಿನಿಮಾ ನೀಡಿರುವ ನಿರ್ದೇಶಕ ನಾಗಶೇಖರ್ ಸದ್ಯ ಸಂಜು ವೆಡ್ಸ್ ಗೀತಾ ಪಾರ್ಟ್2 ಚಿತ್ರದ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಸದ್ಯ ಈ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ನಡೆಯುತ್ತಿದ್ದು, ಇದರ ಬೆನ್ನಲ್ಲೇ ತಮ್ಮ ಮುಂದಿನ ಪ್ರಾಜೆಕ್ಟನ್ನು ಅನೌನ್ಸ್ ಮಾಡಿದ್ದಾರೆ. ಆ ಸಿನಿಮಾನೇ ʻಕ್ಯೂʼ
ʻಕ್ಯೂʼ ಚಿತ್ರಕ್ಕೆ ಬಾಲಿವುಡ್ ನಟಿ ಭಾಗ್ಯಶ್ರೀಯವರ ಪುತ್ರಿ ಅವಂತಿಕಾ ದಸ್ಸಾನಿ ನಾಯಕಿಯಾದರೆ, ರಿಯಲ್ ಸ್ಟಾರ್ ಉಪೇಂದ್ರರ ಅಣ್ಣನ ಮಗ ನಿರಂಜನ್ ನಾಯಕನಾಗಿ ಕಾಣಿಸಿಕೊಳ್ತಿದ್ದಾರೆ. ಈಗಾಗಲೇ ಹೀರೋ ಆಗಿ ಸ್ಯಾಂಡಲ್ವುಡ್ಗೆ ಪರಿಚಯಗೊಂಡಿರೋ ನಿರಂಜನ್ ಸುಧೀಂದ್ರ, ಸೂಪರ್ಸ್ಟಾರ್, ಹಂಟರ್ ಚಿತ್ರಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೀಗ ನಾಗಶೇಖರ್ ʻಕ್ಯೂʼ ಸಿನಿಮಾಗೆ ಸೆಲೆಕ್ಟ್ ಆಗಿದ್ದಾರೆ. ಕ್ಯೂ ಚಿತ್ರ ಕನ್ನಡ, ತೆಲುಗು, ತಮಿಳು ಸೇರಿದಂತೆ ೩ ಭಾಷೆಗಳಲ್ಲಿ ಬಿಗ್ ಬಜೆಟ್ ನಲ್ಲಿ ನಿರ್ಮಾಣಗೊಳ್ತಿದೆ. ನಿರ್ದೇಶಕ ನಾಗಶೇಖರ್ ಅವ್ರು ತಮ್ಮದೇ ಆದ ಮ್ಯಾಜಿಕ್ಸ್ ಸಂಸ್ಥೆ ಅಡಿಯಲ್ಲಿ ಈ ಚಿತ್ರವನ್ನು ನಿರ್ಮಿಸ್ತಿದ್ದಾರೆ.
ವಿಶೇಷ ಅಂದರೆ ನಾಗಶೇಖರ್ ಕ್ಯೂ ಚಿತ್ರಕ್ಕೆ ಕಥೆ, ಚಿತ್ರಕಥೆಯ ಜೊತೆಗೆ ಸಂಗೀತ ಸಂಯೋಜನೆಯನ್ನೂ ಮಾಡ್ತಿದ್ದಾರೆ. ನಿರ್ದೇಶನ, ನಿರ್ಮಾಣ ಹೀಗೆ ಎಲ್ಲಾ ಜವಾಬ್ದಾರಿಯನ್ನೂ ಸಹ ತಾವೇ ಹೊತ್ತಿದ್ದಾರೆ. ಈ ಚಿತ್ರವನ್ನು ಭಾವನಾ ರವಿ ಅವರು ಪ್ರೆಸೆಂಟ್ ಮಾಡುತ್ತಿದ್ದಾರೆ. ಮುಂದಿನ ತಿಂಗಳಿಂದ ಈ ಚಿತ್ರದ ಶೂಟಿಂಗ್ ಆರಂಭವಾಗಲಿದ್ದು, ಡಿ.ಜೆ. ಚಕ್ರವರ್ತಿ ಸಂಭಾಷಣೆ ರಚಿಸಲಿದ್ದಾರೆ.