ಜೈಲಿನಲ್ಲಿ ಮಗನನ್ನು ಕಂಡು ಭಾವುಕರಾದ ಮೀನಾ ತೂಗುದೀಪ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ದರ್ಶನ್ ಅವರನ್ನು ತಾಯಿ ಮೀನಾ ತೂಗುದೀಪ ತಮ್ಮ ಸಹೋದರ ದಿನಕರ್ ಭೇಟಿ ಮಾಡಿ ಧೈರ್ಯ ತುಂಬಿದ್ದಾರೆ. ತಾಯಿ ಹಾಗೂ ಸಹೋದರನನ್ನ ನೋಡಿ ದರ್ಶನ್ ಭಾವುಕರಾಗಿದ್ದಾರೆ. ಮಗನ ಸ್ಥಿತಿಯನ್ನು ನೋಡಿ ಮೀನಾ ಅವರು ಕೂಡ ಭಾವುಕರಾಗಿ ಅಪ್ಪಿಕೊಂಡು ಸಾಂತ್ವನ ಹೇಳಿದ್ದಾರೆ. ಇದೇ ವೇಳೆ ತಮ್ಮ ದಿನಕರ್ ಜೊತೆ ಮುಂದಿನ ಕಾನೂನು ಹೋರಾಟದ ಬಗ್ಗೆ ದರ್ಶನ್ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.