ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ದರ್ಶನ್ ಬಂಧನವಾಗಿ ಒಂದು ತಿಂಗಳು ಕಳೆದಿದೆ. ಸ್ಯಾಂಡಲ್ವುಡ್ನ ನಟರು ಜೈಲಿಗೆ ತೆರಳಿ ದರ್ಶನ ಅವರನ್ನು ಭೇಟಿಯಾಗಿ ಬರುತ್ತಿದ್ದಾರೆ. ಈ ಮಧ್ಯೆ ದರ್ಶನ್ ಅವರ ಕುರಿತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮಾಡನಾಡಿದ್ದು, ನಟ ದರ್ಶನ್ಗೆ ಅನ್ಯಾಯವಾಗಿದಲ್ಲಿ ನ್ಯಾಯಕೊಡಿಸುತ್ತೇನೆ ಎಂದು ಹೇಳಿದರು.
ರಾಮನಗರದ ಚಾಮುಂಡೇಶ್ವರಿ ಕರಗ ಮಹೋತ್ಸವದಲ್ಲಿ ನಟ ದರ್ಶನ್ ಅಭಿಮಾನಿಗಳಿಗೆ ಡಿಸಿಎಂ ಈ ಬಗ್ಗೆ ಭರವಸೆ ನೀಡಿದ್ದಾರೆ. ಕರಗ ಮಹೋತ್ಸವಕ್ಕೆ ಆಗಮಿಸಿದ್ದ ಡಿಸಿಎಂ ಭಾಷಣದ ವೇಳೆ ದರ್ಶನ್ ಅಭಿಮಾನಿಗಳು ಡಿಬಾಸ್ ಡಿಬಾಸ್ ಎಂದು ಘೋಷಣೆ ಕೂಗುತ್ತಿದ್ದರು. ಈ ವೇಳೆ ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಡಿಕೆಶಿ, ದರ್ಶನ್ಗೆ ಅನ್ಯಾಯವಾಗಿದ್ದರೆ ನ್ಯಾಯಕೊಡೊಸೋಣ. ಹಾಗೇ ಈ ದೇಶದ ಕಾನೂನನ್ನು ಗೌರವಿಸಬೇಕಿದೆ. ಕಾನೂನಿನ ಇತಿ ಮಿತಿಯಲ್ಲಿ ಸಹಾಯ ಮಾಡುವುದಾಗಿ ಭರವಸೆ ನೀಡಿದರು.