ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಚುರುಕುಗೊಂಡಿದ್ದು, ಜೈಲು ಸೇರಿರುವ ಪತಿಗಾಗಿ ಪತ್ನಿ ವಿಜಯಲಕ್ಷ್ಮಿ ಅವರು ದೇವರ ಮೊರೆ ಹೋಗಿದ್ದಾರೆ. ಬೆಂಗಳೂರಿನ ಬಂಡೆ ಮಾಂಕಾಳಮ್ಮ ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಅವರು ಜೈಲುಪಾಲಾಗಿದ್ದಾರೆ. ಜೈಲಿನಲ್ಲಿರುವ ಪತಿಯನ್ನು ಹೊರಗೆ ಕರೆದುಕೊಂಡು ಬರಲು ಪತ್ನಿ ವಿಜಯಲಕ್ಷ್ಮಿ ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಕಾನೂನು ಹೋರಾಟದ ಬಗ್ಗೆ ಚಿಂತಿಸಿರುವ ವಿಜಯಲಕ್ಷ್ಮಿ, ದಾಸನಿಗಾಗಿ ಶಕ್ತಿ ದೇವತೆಯ ಮೊರೆ ಹೋಗಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಪ್ರಸಿದ್ಧ ಬಂಡೆ ಮಹಾಕಾಳಿ ಸನ್ನಿಧಿಗೆ ವಿಜಯಲಕ್ಷ್ಮಿ ದರ್ಶನ್ ಭೇಟಿ ಕೊಟ್ಟು, ವಿಶೇಷ ಪೂಜೆ ಸಲ್ಲಿಸಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೆಸ್ಟ್ ಆಗೋ 2 ದಿನಕ್ಕೂ ಮುಂಚೆ ದರ್ಶನ್ ಅವರು ಕೂಡ ಇದೇ ಬಂಡೆ ಮಹಾಕಾಳಿ ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದರು. ಶಕ್ತಿ ದೇವತೆಯ ಮುಂದೆ ದೃಷ್ಟಿ ತೆಗೆಸಿ ತಡೆ ಒಡೆಸಿದ್ದರು ಅನ್ನೋ ಮಾಹಿತಿ ಲಭ್ಯವಾಗಿದೆ. ಇದೀಗ ಪತಿ ದರ್ಶನ್ ಆರೋಪ ಮುಕ್ತರಾಗಲಿ ಎಂದು ಪತ್ನಿ ವಿಜಯಲಕ್ಷ್ಮಿ ಅದೇ ಶಕ್ತಿ ದೇವತೆ ಮೊರೆ ಹೋಗಿದ್ದು, ಪ್ರಾರ್ಥನೆ ಸಲ್ಲಿಸಿದ್ದಾರೆ.