- ಎಮರ್ಜೆನ್ಸಿ ಈ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್
- ಸೆಪ್ಟೆಂಬರ್ 6 ರಂದು ಎಮರ್ಜೆನ್ಸಿ ಸಿನಿಮಾ ರಿಲೀಸ್
- ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ ಕಂಗನಾ
ನಟಿ ಕಂಗನಾ ರಣಾವತ್ ಅಭಿನಯದ ಬಹುನೀರಿಕ್ಷಿತ ಸಿನಿಮಾ ಎಮರ್ಜೆನ್ಸಿ ಈ ಸಿನಿಮಾ ಬಿಡುಗಡೆಗೆ ಡೇಟ್ ಫಿಕ್ಸ್ ಆಗಿದೆ. ಈ ಸಿನಿಮಾದ ಬಿಡುಗಡೆಯನ್ನು ಹಲವು ಬಾರಿ ಮುಂದೂಡಲಾಗಿದ್ದು, ಇದೀಗ ಕಂಗನಾ ಅಭಿಮಾನಿಗಳಿಗೆ ಗುಟ್ ನ್ಯೂಸ್ ನೀಡಿದ್ದಾರೆ. ಸೆಪ್ಟೆಂಬರ್ 6 ರಂದು ಎಮರ್ಜೆನ್ಸಿ ಸಿನಿಮಾ ಥಿಯೇಟರ್ಗಳಲ್ಲಿ ಬಿಡುಗಡೆ ಆಗಲಿದೆ ಎಂದು ಕಂಗನಾ ರಣಾವತ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.
ಕಂಗನಾ ರಣಾವತ್ ಮಂಗಳವಾರ ತಮ್ಮ ಎಕ್ಸ್ ಹ್ಯಾಂಡಲ್ನಲ್ಲಿ ‘ಎಮರ್ಜೆನ್ಸಿ’ ಚಿತ್ರದ ಪೋಸ್ಟರ್ ಅನ್ನು ಹಂಚಿಕೊಂಡಿದ್ದಾರೆ. ಎಮರ್ಜೆನ್ಸಿ ಸಿನಿಮಾ ಇಂದಿರಾ ಗಾಂಧಿ ಕುರಿತ ಸಿನಿಮಾ ಎನ್ನಲಾಗ್ತಿದೆ. ನಟಿ ಶೇರ್ ಮಾಡಿದ ಈ ಫೋಟೋದಲ್ಲಿ ದೇಶದ ಮಾಜಿ ಪ್ರಧಾನಿ ಇಂದಿರಾ ಗಾಂಧಿ ಲುಕ್ನಲ್ಲಿ ಕಂಗನಾ ಕಾಣಿಸಿಕೊಂಡಿದ್ದಾರೆ. ‘ಸ್ವತಂತ್ರ ಭಾರತದ ಕರಾಳ ಅಧ್ಯಾಯದ 50 ನೇ ವರ್ಷದ ಆರಂಭ’ ಎಂಬ ಶೀರ್ಷಿಕೆ ನೀಡಿದ್ದಾರೆ. ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಅತ್ಯಂತ ವಿವಾದಾತ್ಮಕ ಪ್ರಸಂಗದ ಸ್ಫೋಟಕ ಕಥೆ ಎಂದು ಬರೆದಿದ್ದಾರೆ. ಎಮರ್ಜೆನ್ಸಿ ಸಿನಿಮಾ 2024 ಸೆಪ್ಟೆಂಬರ್ 6 ರಂದು ವಿಶ್ವದಾದ್ಯಂತ ಥಿಯೇಟರ್ ಗಳಲ್ಲಿ ಬಿಡುಗಡೆಯಾಗಲಿದೆ.