ನಟಿ ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಇತ್ತೀಚೆಗೆ ಅವರು ಸೋಶಿಯಲ್ ಮೀಡಿಯಾದಲ್ಲಿ ತಮಗಾದ ಭಯಾನಕ ಅನುಭವವನ್ನು ಹಂಚಿಕೊಂಡಿದ್ದಾರೆ. ಹರ್ಷಿಕಾ ಪೂಣಚ್ಚ ಹಾಗೂ ಭುವನ್ ಪೊನ್ನಣ್ಣ ಅವರು ತಮ್ಮ ಕುಟುಂಬದವರ ಜೊತೆ ಊಟಕ್ಕೆಂದು ಪುಲಿಕೇಶಿ ನಗರದ ಮಸೀದಿ ರಸ್ತೆಯಲ್ಲಿರುವ ಕರಾಮಾ ಎಂಬ ರೆಸ್ಟೊರೆಂಟ್ಗೆ ಹೋಗಿದ್ದರು. ಈ ವೇಳೆ ಪಾರ್ಕಿಂಗ್ ವಿಚಾರವಾಗಿ ತಗಾದೆ ತೆಗೆದು, ಇಬ್ಬರು ವ್ಯಕ್ತಿಗಳು ಬಂದು ಗಲಾಟೆ ಮಾಡಿದ್ದಾರೆ. ಭುವನ್ ಅವರಿಂದ ಚಿನ್ನದ ಸರ ಕಿತ್ತುಕೊಳ್ಳಲು ಯತ್ನಸಿದ್ದಾರೆ. ನನ್ನ ಪತಿ ಇದನ್ನು ಸಮಯಕ್ಕೆ ಸರಿಯಾಗಿ ಅರಿತುಕೊಂಡು, ಅದನ್ನು ಹಿಡಿದಿಟ್ಟುಕೊಂಡು ನನಗೆ ಕೊಟ್ಟರು ಎಂದು ಹರ್ಷಿಕಾ ಬರೆದುಕೊಂಡಿದ್ದಾರೆ.
ಅಲ್ಲದೆ ಅವರಿಗೆ ನಾವು ಕನ್ನಡದಲ್ಲಿ ಮಾತನಾಡುತ್ತಿದ್ದೇವೆ ಎಂಬುದು ಸಮಸ್ಯೆ ಆಗಿತ್ತು. ನೀವು ನಮ್ಮ ಪ್ರದೇಶಕ್ಕೆ ಬಂದಿದ್ದೀರಾ, ನಿಮಗೆ ಬೇಕಾದ ಭಾಷೆಯಲ್ಲಿ ಮಾತನಾಡುವುದನ್ನು ನಿಲ್ಲಿಸಿ ಎನ್ನುತ್ತಿದ್ದರು. ಅಲ್ಲದೇ ಹಿಂದಿ ಉರ್ದು ಅಥವಾ ಇಂಗ್ಲೀಷ್ ಕನ್ನಡಲದಲ್ಲಿ ಮಾತನಾಡಿ ನಿಂದಿಸಿದ್ದಾರೆ ಈ ಘಟನೆ ಬಗ್ಗೆ ವಿವರಿಸಿದ ಹರ್ಷಿಕಾ ನಮ್ಮೂರಲ್ಲಿ ನಮಗೆ ರಕ್ಷಣೆ ಇಲ್ವಾ ಎಂದು ಪ್ರಶ್ನಿಸಿದ್ದಾರೆ.