ಬಾಲಿವುಡ್ ಹಾಟ್ ಬೆಡಗಿ ಜಾನ್ವಿ ಕಪೂರ್ಗೆ ದಿಢೀರ್ ಅಂತ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಂಬೈನ ಆಸ್ಪತ್ರೆಗೆ ಬಾಲಿವುಡ್ ನಟಿ ದಾಖಲಾಗಿದ್ದಾರೆ. ಮೂಲಗಳ ಪ್ರಕಾರ ನಟಿಗೆ ಫುಡ್ ಪಾಯಿಸನ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರಂತೆ. ಈ ಸುದ್ದಿಯನ್ನು ಜಾನ್ವಿ ಕಪೂರ್ ಅವರ ತಂದೆ ಬೋನಿ ಕಪೂರ್ ಖಚಿತಪಡಿಸಿದ್ದಾರೆ.
ಸದ್ಯ ಜಾನ್ವಿ ಕಪೂರ್ ಅವರ ಸ್ಥಿತಿ ಈಗ ಉತ್ತಮವಾಗಿದೆ ಮತ್ತು 1-2 ದಿನಗಳಲ್ಲಿ ಅವರು ಚೇತರಿಸಿಕೊಳ್ಳುವ ಸಾಧ್ಯತೆಯಿದೆ. ನಂತರ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ ಎಂದು ಅವರು ಹೇಳಿದ್ದಾರೆ. ಇನ್ನು ವಿಚಾರ ತಿಳಿಯುತ್ತಿದ್ದಂತೆ ಶಾಕ್ ಆಗಿದ್ದಾರೆ. ಬಳಿಕ ನಟಿ ಜಾನ್ವಿ ಕಪೂರ್ ಆದಷ್ಟು ಬೇಗ ಗುಣಮುಖರಾಗಿ ಬರಲಿ ಎಂದು ಕಾಮೆಂಟ್ ಮಾಡುವ ಮೂಲಕ ಕಳವಳ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು, ನಟಿ ಜಾನ್ವಿ ಕಪೂರ್ ಕಳೆದ ಕೆಲವು ತಿಂಗಳುಗಳಿಂದ ಸಾಕಷ್ಟು ಬ್ಯುಸಿಯಾಗಿದ್ದರು. ನಟಿಯ ಮಿಸ್ಟರ್ ಅಂಡ್ ಮಿಸೆಸ್ ಮಹಿ ಚಿತ್ರ ಬಿಡುಗಡೆಯಾಯಿತು. ಅದರ ಪ್ರಚಾರಕ್ಕಾಗಿ ದೇಶಾದ್ಯಂತ ಸಂಚರಿಸುತ್ತಿದ್ದಳು. ಚಿತ್ರ ಬಿಡುಗಡೆಯಾದ ಕೆಲವೇ ದಿನಗಳಲ್ಲಿ ಮುಖೇಶ್ ಅಂಬಾನಿ ಕಿರಿಯ ಮಗ ಅನಂತ್ ಮತ್ತು ರಾಧಿಕಾ ಅವರ ಮದುವೆಯಲ್ಲಿ ಕಾಣಿಸಿಕೊಂಡರು. ನಂತರ ಜುಲೈ 15 ರಂದು ಉಲ್ಜ್ ಚಿತ್ರದ ಪ್ರಚಾರ ಕಾರ್ಯಕ್ರಮದಲ್ಲೂ ಕಾಣಿಸಿಕೊಂಡರು. ಆದರೆ ಇದೀಗ ಫುಡ್ ಪಾಯಿಸನ್ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ.