ಬಡವರು ಹಾಗೂ ದೀನದಲಿತರ ಸೇವೆಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟಿದ್ದ ಮಹಿಳೆ, ಪದ್ಮಶ್ರೀ ಪುರಸ್ಕೃತೆ, ಶಾಂತಿಗಾಗಿ ನೊಬೆಲ್ ಪ್ರಶಸ್ತಿ ಪಡೆದ ಮದರ್ ತೆರೇಸಾ ಅವರ ಜೀವನ ಚರಿತ್ರೆ ಇದೀಗ ವೆಬ್ ಸರಣಿಯಲ್ಲಿ ಮೂಡಿಬರಲಿದೆ. ಸಾಹಿತಿ, ಚಿತ್ರಕಥೆಗಾರ ದಿ. ಜಾನ್ ಪಾಲ್ ಪುತ್ತುಸ್ಸೆರಿ, ಹಾಗೂ ನಿರ್ದೇಶಕ ಪಿ. ಚಂದ್ರಕುಮಾರ್ ಸೇರಿ ಮೂರು ವರ್ಷಗಳಿಂದ ಇವರ ಬಗ್ಗೆ ಮಾಹಿತಿ ಕಲೆಹಾಕಿ ಈ ಸೀರೀಸ್ ಮಾಡುತ್ತಿದ್ದಾರೆ.
ಮದರ್ ತೆರೇಸಾ ವೆಬ್ ಸರಣಿಯ ಶೀರ್ಷಿಕೆ ಹಾಗೂ ಬ್ಯಾನರ್ ಅನಾವರಣ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಈಗಾಗಲೇ ಮಲಯಾಳಂ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದೆ. ಹಿಂದಿಯಲ್ಲಿ ಸಿನಿಮಾ ಮಾಡಿರುವ ಚಂದ್ರಶೇಖರ್ ಅವರು ಬಹುಭಾಷೆಗಳಲ್ಲಿ ತಯಾರಾಗಲಿರುವ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ನಿರ್ಮಾಣ ಮಾಡುತ್ತಿದ್ದಾರೆ.
ಮದರ್ ತೆರೇಸಾ ಅವರ ಬಾಲ್ಯ, ಹರೆಯದ ಜೀವನ ಹೇಗಿತ್ತು ಹಾಗೂ ಅವರ ಹಿರಿಯ ವಯಸ್ಸಿನಲ್ಲಿ ನಡೆದ ಘಟನೆಗಳು, ಸಮಾಜಸೇವೆ ಇದನ್ನೆಲ್ಲ ಈ ಪ್ಯಾನ್ ಇಂಡಿಯಾ ವೆಬ್ ಸೀರೀಸ್ ಮೂಲಕ ನಿರ್ದೇಶಕ ಚಂದ್ರಶೇಖರ್ ಹೇಳಲು ಹೊರಟಿದ್ದಾರೆ. ಮದರ್ ತೆರೇಸಾ ಅವರು ಎಲ್ಲೆಲ್ಲಿ ಹೋಗಿದ್ದರು, ಅವರು ಹೆಜ್ಜೆ ಇಟ್ಟ ನೆಲದಲ್ಲೇ ಶೂಟಿಂಗ್ ಮಾಡಲಾಗುತ್ತಿದೆ. ಅವರು ನೆಲೆಸಿದ್ದ ರೋಮ್. ಜೆರುಸಲೆನಿಯಂ, ಟೆಥ್ಲೆಹೆಮ್, ಮ್ಯಾಸಿಡೋನಿಯಾ. ಯುಕೆ. ಮತ್ತು ಇಟಲಿಯಂತಹ ಸ್ಥಳಗಳ ಜೊತೆಗೆ ಮದರ್ ತೆರೇಸಾ ಅವರ ಜೀವನದ ಮೇಲೆ ಪ್ರಭಾವ ಬೀರಿದ ಪಶ್ಚಿಮ ಬಾಂಗಾಳ, ಬಾಂಗ್ಲಾದೇಶ, ಮುಂಬೈ, ಕೇರಳ, ಬಿಹಾ, ಕರ್ನಾಟಕ ಮುಂತಾದ ಪ್ರಮುಖ ಸ್ಥಳಗಳಲ್ಲೆ ಚಿತ್ರೀಕರಣ ನಡೆಯಲಿದೆ.
ನಿರ್ದೇಶಕ ಪಿ. ಚಂದ್ರಕುಮಾರ್ ಮಾತನಾಡುತ್ತ ಮದರ್ ತೆರೇಸಾ ಅವರ ಬಾಲ್ಯದಿಂದಲೇ ಕಥೆ ಶುರುವಾಗುತ್ತದೆ. ಅವರ ಹರೆಯದ ಪಾತ್ರಕ್ಕಾಗಿ ಹೊಸ ಪ್ರತಿಭೆಗಳ ಹುಡುಕಾಟ ನಡೆಯುತ್ತಿದೆ. ರಾಜ್ಯದಲ್ಲೂ ಪಾತ್ರಗಳಿಗಾಗಿ ಅಡಿಶನ್ ಮಾಡಲಾಗುತ್ತದೆ. ಅವರು ಡಾರ್ಜಿರ್ಲಿಂಗ್ ನಲ್ಲಿ ಶಿಕ್ಷಕರಾಗಿ ಹೆಚ್ಚು ಕಾಲ ಕಳೆದಿದ್ದಾರೆ. ಅಲ್ಲದೆ ಅವರ ಬಗ್ಗೆ ಸಾಕಷ್ಟು ಕಾಂಟ್ರವರ್ಸಿ ಇದ್ದು, ಅದನ್ನೆಲ್ಲ ಈ ಕಥೆಯಲ್ಲಿ ತಂದಿದ್ದೇವೆ. ತುಂಬಾ ನೈಜವಾಗಿ ಈ ಸೀರೀಸ್ ಮೂಡಿ ಬರಲಿದೆ ಎಂದರು.
ನಿರ್ಮಾಪಕ ಚಂದ್ರಶೇಖರ್ ಮಾತನಾಡುತ್ತ ಈಗಾಗಲೇ ಮಲಯಾಳಂ, ತಮಿಳು, ತೆಲುಗು, ಹಿಂದಿ ಸಿನಿಮಾಗಳನ್ನು ನಿರ್ಮಿಸಿದ್ದು ಕನ್ನಡದಲ್ಲಿ ಮೊದಲ ಬಾರಿಗೆ ಮಾಡುತ್ತಿದ್ದೇವೆ. ಯಂಗ್ ತೆರೇಸಾ ಪಾತ್ರಕ್ಕಾಗಿ ಹುಡುಕುತ್ತಿದ್ದೇವೆ. ನಾಲ್ಕು ವರ್ಷದ ಹಿಂದೆಯೇ ಇದರ ಪ್ಲ್ಯಾನ್ ಮಾಡಿದ್ದೆವು. ಮೂರು ಸೀಜನ್ ನಲ್ಲಿ ಒಟ್ಟು 30 ಎಪಿಸೋಡ್ ಇರಲಿದೆ. ಜೂನ್ ನಲ್ಲಿ 10 ಎಪಿಸೋಡ್ ಪ್ರಸಾರವಾಗಲಿದೆ, ಒಟಿಟಿ ಪ್ಲಾಟ್ ಫಾರ್ಮ್ ನಲ್ಲಿ ಈ ಸೀರೀಸ್ ರಿಲೀಸಾಗಲಿದ್ದು, ಈ ಬಗ್ಗೆ ಮಾತುಕತೆ ನಡೆಯುತ್ತಿದೆ. ಪತ್ರಕರ್ತರೊಬ್ಬರ ದೃಷ್ಟಿಕೋನದಲ್ಲಿ ಈ ಕಥೆ ಸಾಗುತ್ತದೆ ಎಂದು ಹೇಳಿದರು. ಪಿ.ಸುಕುಮಾರ್ ಅವರ ಛಾಯಾಗ್ರಹಣ, ಜರೀ ಅಮರದೇವ ಅವರ ಸಂಗೀತ ಇದ್ದು, ಅನಿತಾ ಮೆನ್ನನ್, ತನಿಮಾ ಮೆನ್ನನ್, ಸಾಪಿಕೌರ್, ಜೋಷಿ ಜೋಸೆಫ್ ಪ್ರಮುಖ ತಾರಾಗಣದಲ್ಲಿದ್ದಾರೆ.