ಪುಷ್ಪ 2 ಸಿನಿಮಾ ಯಶಸ್ಸು ಕಂಡ ಬೆನ್ನಲ್ಲೇ ನಟಿ ರಶ್ಮಿಕಾ ಮಂದಣ್ಣ ವೆಕೇಷನ್ ಮೂಡ್ನಲ್ಲಿ ಇದ್ದಾರೆ. ವರ್ಷದಲ್ಲಿ ಒಂದೆರಡು ಬಾರಿ ವೆಕೇಷನ್ಗಾಗಿ ಭಾರತದಿಂದ ಹೊರಗೆ ಹೋಗುತ್ತಾರೆ. ಈ ಹಿಂದೆ ವಿಜಯ್ ದೇವರಕೊಂಡ ಜೊತೆ ನಟಿ ಮಾಲ್ಡೀವ್ಸ್ ಹೋಗಿದ್ದು ಭಾರೀ ಸುದ್ದಿಯಾಗಿತ್ತು. ಅಲ್ಲದೇ ಅವರು ಆಗಾಗ ಜೊತೆಯಾಗಿ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ. ಇದೀಗ ಮುಂಬೈನ ಏರ್ಪೋರ್ಟ್ನಲ್ಲಿ ರಶ್ಮಿಕಾ ಹಾಗೂ ವಿಜಯ್ ಕಾಣಿಸಿಕೊಂಡಿದ್ದಾರೆ.
ಡಿ.23ರಂದು ತಡರಾತ್ರಿ ಮುಂಬೈ ಏರ್ಪೋರ್ಟ್ನಲ್ಲಿ ವಿಜಯ್ ಮತ್ತು ರಶ್ಮಿಕಾ ಪ್ರತ್ಯೇಕವಾಗಿ ಕಾಣಿಸಿಕೊಂಡಿದ್ದಾರೆ. ಆದರೂ ಇಬ್ಬರೂ ಜೊತೆಯಾಗಿ ಒಂದೇ ವಿಮಾನದಲ್ಲಿ ಪ್ರಯಾಣಿಸಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಈ ಬಗ್ಗೆ ಯಾವುದೇ ಕ್ಲ್ಯಾರಿಟಿ ಸಿಕ್ಕಿಲ್ಲ.
ವಿಜಯ್ ಮತ್ತು ರಶ್ಮಿಕಾ ಜೊತೆಯಾಗಿ 2 ಸಿನಿಮಾ ಮಾಡಿರೋದ್ರಿಂದ ಇಬ್ಬರ ನಡುವಿನ ರಿಲೇಷನ್ಶಿಪ್ ಬಗ್ಗೆ ಆಗಾಗ ಚರ್ಚೆಯಾಗುತ್ತಲೇ ಇರುತ್ತದೆ. ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಎಲ್ಲೂ ಅಧಿಕೃತವಾಗಿ ತಿಳಿಸಿಲ್ಲ.