ತೆಲುಗು ಸೂಪರ್ಸ್ಟಾರ್ ನಂದಮೂರಿ ಬಾಲಕೃಷ್ಣ ಇತ್ತೀಚೆಗೆ ತಮ್ಮ ಚಿತ್ರ `ಗ್ಯಾಂಗ್ಸ್ ಆಫ್ ಗೋದಾವರಿ’ ಪ್ರಚಾರ ಸಮಾರಂಭದಲ್ಲಿ ಭಾಗಿಯಾಗಿದ್ದರು. ಈ ವೇಳೆ ನಟಿ ಅಂಜಲಿಯನ್ನು ವೇದಿಕೆಯಲ್ಲಿ ತಳ್ಳಿದ್ದು, ಈ ವಿಡಿಯೋವೊಂದು ವೈರಲ್ ಆಗಿದೆ. ‘ಗ್ಯಾಂಗ್ಸ್ ಆಫ್ ಗೋದಾವರಿ’ಯ ಪ್ರೀ-ರಿಲೀಸ್ ಸಮಾರಂಭದಲ್ಲಿ ಬಾಲಕೃಷ್ಣ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಈ ಚಿತ್ರದಲ್ಲಿ ವಿಶ್ವಕ್ ಸೇನ್ ಹಾಗೂ ನೇಹಾ ಶೆಟ್ಟಿ ಕೂಡ ನಟಿಸಿದ್ದಾರೆ. ಈ ಕಾರ್ಯಕ್ರಮದ ವೇದಿಕೆ ಮೇಲೆ ನಡೆದ ಘಟನೆ ಅನೇಕರನ್ನು ಬೆಚ್ಚಿ ಬೀಳಿಸಿದೆ.
ಇದೀಗ ಬಾಲಯ್ಯ ಅವರ ವರ್ತನೆಗೆ ನೆಟ್ಟಿಗರು ಛಿಮಾರಿ ಹಾಕುತ್ತಿದ್ದಾರೆ. ಇನ್ನು, ವೇದಿಕೆ ಬಳಿ ನೀರಿನ ಬಾಟಲ್ನಲ್ಲಿ ಮದ್ಯ ಸೇವಿಸಿದ್ದಾರೆ ಎನ್ನುವ ಆರೋಪವೂ ಕೇಳಿಬಂದಿದೆ. ಕಾರ್ಯಕ್ರಮದಲ್ಲಿ ಮದ್ಯ ಸೇವಿಸಿ ಬಾಲಕೃಷ್ಣ ವೇದಿಕೆಯಲ್ಲಿ ನಟಿ ಅಂಜಲಿ ಜತೆ ಆ ರೀತಿ ನಡೆದುಕೊಂಡಿದ್ದಾರೆ ಎನ್ನಲಾಗ್ತಿದೆ. ಬಾಟಲ್ನ ಫೋಟೊಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ.