ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿ ಪವಿತ್ರಾ ಗೌಡ ಜೈಲು ಸೇರಿದ್ದಾರೆ. ಜೂನ್ 11 ರಂದು ಅವರನ್ನು ಬಂಧಿಸಲಾಗಿತ್ತು. ಇತ್ತೀಚೆಗಷ್ಟೆ ಪವಿತ್ರಾ ಗೌಡ ಪರ ವಕೀಲರು ಜಾಮೀನು ಅರ್ಜಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಇಂದು ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿಯ ವಿಚಾರಣೆ ನಡೆದಿದ್ದು, ವಿಚಾರಣೆ ಆಲಿಸಿದ ನ್ಯಾಯಾಧೀಶರು ಜಾಮೀನು ಅರ್ಜಿಯ ಆದೇಶವನ್ನು ಆಗಸ್ಟ್ 31ಕ್ಕೆ ಕಾಯ್ದಿರಿಸಿದ್ದಾರೆ. ಇನ್ನೂ ದರ್ಶನ್ ರನ್ನ ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲು ಸಕಲ ಸಿದ್ದತೆಗಳು ನಡೆದಿದೆ ಎನ್ನಲಾಗಿದೆ.