- ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ
- ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ಸಂಭ್ರಮಾಚರಣೆ ಮಾಡುವುದು ಸರಿಯಲ್ಲ
- ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎಂದ ರಕ್ಷಕ್ ಬುಲೆಟ್
ಬಿಗ್ ಬಾಸ್ ರಿಯಾಲಿಟಿ ಶೋ ಮೂಲಕ ಹೆಚ್ಚು ಜನಪ್ರಿಯರಾದ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಸೇನ, ಈಗ ಸಿನಿಮಾ ಮಾಡುವ ಉತ್ಸಾಹದಲ್ಲಿದ್ದಾರೆ. ಹೋರೋ ಆಗಿ ಲಾಂಚ್ ಆಗುವುದಕ್ಕೆ ಬೇಕಾದ ಸಿದ್ಧತೆಗಳನ್ನು ರಕ್ಷಕ್ ಈಗಾಗಲೇ ಆರಂಭಿಸಿದ್ದಾರೆ. ತಂದೆಯಂತೆಯೇ ಬಣ್ಣದ ಲೋಕದಲ್ಲಿ ಅಪಾರವಾದ ಸಾಧನೆ ಮಾಡುವುದು ರಕ್ಷಕ್ ಕನಸು. ಬಿಗ್ ಬಾಸ್ ಸ್ಪರ್ಧಿಯಾಗಿ ಹೋಗಿಬಂದ ಅವರು ಇನ್ನಷ್ಟು ಜನಪ್ರಿಯತೆಯನ್ನು ಪಡೆದುಕೊಂಡರು. ರಕ್ಷಕ್ ಹಂಚಿಕೊಂಡಿರುವ ಒಂದು ಪೋಸ್ಟ್ ಎಲ್ಲರ ಗಮನ ಸೆಳೆಯುತ್ತಿದೆ.
ಶಿಘ್ರದಲ್ಲೇ ರಕ್ಷಕ್ ಬುಲೆಟ್ ಅವರ ಹುಟ್ಟುಹಬ್ಬವಿದೆ. ಆದರೆ ಈ ಬಾರಿ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎಂಬ ನಿರ್ಧಾರಕ್ಕೆ ರಕ್ಷಕ್ ಬಂಧಿದ್ದಾರೆ. ಇತ್ತೀಚಿನ ದಿನಗಳಲ್ಲಿ ನಡೆದ ಕೆಲವೊಂದು ಘಟನೆಗಳು ಮನಸ್ಸಿಗೆ ನೋವು ತಂದಿದೆ. ನಮ್ಮ ಮನಸ್ಸಿಗೆ ಹತ್ತಿರವಾದವರು ಕಷ್ಟ ಅನುಭವಿಸುತ್ತಿರುವಾಗ ನಾವು ಸಂಭ್ರಮಾಚರಣೆ ಮಾಡುವುದು ಸರಿಯಲ್ಲ ಎನ್ನುವುದು ನನ್ನ ಭಾವನೆ. ನಾನು ಈ ವರ್ಷ ಹುಟ್ಟುಹಬ್ಬ ಆಚರಣೆ ಮಾಡುವುದು ಬೇಡ ಎನ್ನುವ ತೀರ್ಮಾನಕ್ಕೆ ಬಂದಿದ್ದೇನೆ ಎಂದು ರಕ್ಷಕ್ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.