ಸ್ಯಾಂಡಲ್ವುಡ್ ನಟ ರಕ್ಷಿತ್ ಶೆಟ್ಟಿ ಅವರ ವಿರುದ್ಧ ಕೇಸ್ ದಾಖಲಾಗಿದೆ. ಕಾಪಿರೈಟ್ ಉಲ್ಲಂಘನೆ ಆರೋಪದಡಿ ನಟ ರಕ್ಷಿತ್ಶೆಟ್ಟಿ ವಿರುದ್ಧ ಬೆಂಗಳೂರಿನ ಯಶವಂತಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಕ್ಕುಸ್ವಾಮ್ಯ, ಪ್ರಸಾರದ ಹಕ್ಕನ್ನು ಖರೀದಿಸದೆ ಹಾಡುಗಳ ಬಳಕೆ ಮಾಡಿದ್ದಾಗಿ ನವೀನ್ ಆರೋಪಿಸಿದ್ದಾರೆ. ಎರಡು ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ನವೀನ್ ಆರೋಪಿಸಿದ್ದಾರೆ. ಎರಡು ಚಿತ್ರದ ಹಾಡುಗಳನ್ನು ಅನುಮತಿ ಇಲ್ಲದೆ ಬಳಕೆ ಆರೋಪದಡಿಯಲ್ಲಿ ರಕ್ಷಿತ್ ಶೆಟ್ಟಿ ಅವರಿಗೆ ಸಂಕಷ್ಟ ಎದುರಾಗಿದೆ. ಈಗಾಗಲೇ ದೂರವಾಣಿ ಕರೆ ಮಾಡಿ ಪೊಲೀಸರು ರಕ್ಷಿತ್ ಶೆಟ್ಟಿ ಬಳಿ ಮಾತನಾಡಿದ್ದಾರೆ. ವಿಚಾರಣೆಗೆ ಹಾಜರಾಗುವಂತೆ ಅವರಿಗೆ ಸೂಚನೆ ನೀಡಲಾಗಿದೆ.
ನವೀನ್ ಕುಮಾರ್ ಎಂಬುವವರು ರಕ್ಷಿತ್ ಶೆಟ್ಟಿ ದೂರು ದಾಖಲು ಮಾಡಿದ್ದಾರೆ. ನವೀನ್ ಕುಮಾರ್ ಅವರು MRT ಮ್ಯೂಸಿಕ್ನ ಪಾಲುದಾರಿಕೆ ಹೊಂದಿದ್ದಾರೆ. ‘ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ಬಳಕೆ ಆದ ‘ನ್ಯಾಯ ಎಲ್ಲಿದೆ..’ ಹಾಗೂ ‘ಗಾಳಿಮಾತು..’ ಚಿತ್ರದ ಹಾಡುಗಳನ್ನು ರಕ್ಷಿತ್ ಶೆಟ್ಟಿ ನಿರ್ಮಾಣದ ‘ಬ್ಯಾಚುಲರ್ ಪಾರ್ಟಿ’ಯಲ್ಲಿ ಅಕ್ರಮವಾಗಿ ಬಳಕೆ ಮಾಡಿಕೊಂಡಿದ್ದಾರೆ ಎಂದು ಹೇಳಿದ್ದಾರೆ.
ಜನವರಿಯಲ್ಲಿ ಚಿತ್ರದ ಹಾಡು ಬಳಕೆ ಬಗ್ಗೆ ರಕ್ಷಿತ್ ಶೆಟ್ಟಿ ಅವರ ಜೊತೆ ಮಾತುಕತೆ ಆಗಿತ್ತಂತೆ. ಆದರೆ, ಚಿತ್ರದ ಹಾಡು ಬಳಕೆ ಬಗ್ಗೆ ಮಾತುಕತೆ ಸರಿ ಹೊಂದಿರಲಿಲ್ಲ. ಹೀಗಾಗಿ, ಮಾತುಕತೆ ಮುಂದುವರಿಯಲಿಲ್ಲ. 2024ರ ಮಾರ್ಚ್ನಲ್ಲಿ ಬ್ಯಾಚುಲರ್ ಪಾರ್ಟಿ ಚಿತ್ರ ರಿಲೀಸ್ ಆಗಿತ್ತು. ‘ಬ್ಯಾಚುಲರ್ ಪಾರ್ಟಿ’ ಸಿನಿಮಾ ಗಮನಿಸಿದಾಗ 2 ಚಿತ್ರಗಳ ಹಾಡು ಬಳಕೆ ಆಗಿತ್ತು.