ಕಾಪಿರೈಟ್ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಿತ್ ಶೆಟ್ಟಿ ಇಂದು ಯಶವಂತಪುರ ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆ ಹಾಜರಾಗಿದ್ದಾರೆ. ಬ್ಯಾಚುಲರ್ ಪಾರ್ಟಿ’ ಸಿನಿಮಾದಲ್ಲಿ ‘ನ್ಯಾಯ ಎಲ್ಲಿದೆ’ ಎಂಬ ಹಾಡು ಮತ್ತು ‘ಒಮ್ಮೆ ನಿನ್ನನ್ನು ಕಣ್ತುಂಬ ನೋಡುವಾಸೆ’ ಸಾಂಗ್ ಅನುಮತಿ ಇಲ್ಲದೆ ಬಳಸಿದಕ್ಕೆ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಜುಲೈ 15ರಂದು ರಕ್ಷಿತ್ ಶೆಟ್ಟಿ ವಿರುದ್ಧ ಎಂಆರ್ಟಿ ಮ್ಯೂಸಿಕ್ ಪಾಲುದಾರರಾಗಿರುವ ನವೀನ್ ಕುಮಾರ್ ದೂರು ನೀಡಿದ್ದರು. ನ್ಯಾಯ ಎಲ್ಲಿದೆ ಚಿತ್ರದ ‘ನ್ಯಾಯ ಎಲ್ಲಿದೆ’ ಹಾಡು ಮತ್ತು ಗಾಳಿ ಮಾತು ಚಿತ್ರದ ‘ಒಮ್ಮೆ ನಿನ್ನನ್ನು’ ಅನಧಿಕೃತವಾಗಿ ಹಾಡು ಬಳಕೆ ಮಾಡಿದ ಆರೋಪದಲ್ಲಿ ಪರಂವಾ ಸ್ಟುಡಿಯೋಸ್ ಮತ್ತು ರಕ್ಷಿತ್ ಶೆಟ್ಟಿ ವಿರುದ್ಧ ದೂರು ದಾಖಲಾಗಿತ್ತು. ಇಂದು ನಟ ರಕ್ಷಿತ್ ಶೆಟ್ಟಿ ಯಶವಂತಪುರ ಪೊಲೀಸ್ ಠಾಣೆಗೆ ಆಗಮಿಸಿ ವಿಚಾರಣೆ ಎದುರಿಸುತ್ತಿದ್ದಾರೆ.