- ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರ ತನಿಖೆಗೆ ಭಾರೀ ಮೆಚ್ಚುಗೆ
- ಕರ್ನಾಟಕ ಪೊಲೀಸರಿಗೆ ಸೆಲ್ಯೂಟ್ ಎಂದ ನಟಿ ರಮ್ಯಾ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣವನ್ನ ಪೊಲೀಸರು ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದಾರೆ. ಪೊಲೀಸರ ಕಾರ್ಯಾಚರಣೆ ಹಾಗೂ ತನಿಖೆಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸೂಕ್ತ ಸಾಕ್ಷ್ಯಗಳನ್ನು ಕಲೆ ಹಾಕುತ್ತಾ ದರ್ಶನ್ ಮತ್ತು ಅವರ ಗ್ಯಾಂಗ್ ವಿರುದ್ಧ ಕಾನೂನು ಕ್ರಮ ಜರುಗಿಸುತ್ತಿದ್ದಾರೆ. ಪೊಲೀಸರ ಈ ಕಾರ್ಯಾಚರಣೆಗೆ ಸ್ಯಾಂಡಲ್ ವುಡ್ ನಟಿ ರಮ್ಯಾ ಅವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ನಟ ದರ್ಶನ್ ಅರೆಸ್ಟ್ ಆದ ಬಳಿಕ ನಟಿ ರಮ್ಯಾ ಅವರು ಕರ್ನಾಟಕ ಬಾಕ್ಸ್ಆಫೀಸ್ ಖಾತೆಯಿಂದ ಮಾಡಿದ್ದ ಟ್ವೀಟ್ವೊಂದನ್ನು ರೀ ಟ್ವೀಟ್ ಮಾಡಿದ್ದರು. ದರ್ಶನ್ ಅವರಿಗೆ ಜೀವಾವಧಿ ಶಿಕ್ಷೆ ಅಥವಾ ಮರಣದಂಡನೆ ಆಗಬಹುದು ಎನ್ನುವ ಟ್ವೀಟ್ ಅನ್ನು ರಮ್ಯಾ ಅವರು ರೀ ಪೋಸ್ಟ್ ಮಾಡಿಕೊಂಡಿದ್ದರು.
ಇದಾದ ಬಳಿಕ ನಟ ದರ್ಶನ್ ಮತ್ತು ಅವರ ಗ್ಯಾಂಗ್ ಬಂಧನ ಹಾಗೂ ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿಯಾದ ಹಿನ್ನೆಲೆಯಲ್ಲಿ ರಮ್ಯಾ ಅವರು ಕರ್ನಾಟಕ ಪೊಲೀಸರನ್ನ ಶ್ಲಾಘಿಸಿ ಟ್ವೀಟ್ ಮಾಡಿದ್ದಾರೆ. ಕರ್ನಾಟಕ ಪೊಲೀಸರಿಗೆ ಸೆಲ್ಯೂಟ್ ಎಂದು ರಮ್ಯಾ ಪೋಸ್ಟ್ ಹಾಕಿದ್ದಾರೆ.