ಸೆಂಚುರಿಸ್ಟಾರ್ ಶಿವರಾಜ್ಕುಮಾರ ಹುಟ್ಟುಹಬ್ಬ ಹತ್ತಿರ ಬರುತ್ತಾ ಇದೆ.. ಜುಲೈ 12 ಕ್ಕೆ ಹಬ್ಬ ಮಾಡಬೇಕು ಅಂತ ಫ್ಯಾನ್ಸ್ ಕೂಡ ಕಾಯ್ತ ಇದ್ದಾರೆ. ಇದೀಗ ಅಭಿಮಾನಿಗಳಿಗೆ ಅದೇ ದಿನ ಭರ್ಜರಿ ಗಿಫ್ಟ್ ಕೂಡ ಸಿಗ್ತಾ ಇದೆ.
ನರ್ತನ್ ನಿರ್ದೇಶನದಲ್ಲಿ ಅದ್ಧೂರಿಯಾಗಿ ಮೂಡಿಬರುತ್ತಿದೆ ಭೈರತಿ ರಣಗಲ್ ಸಿನಿಮಾ. ಒಂದಿಲ್ಲೊಂದು ಕಾರಣಕ್ಕೆ ಸುದ್ದಿಯಲ್ಲಿರುವ ಈ ಸಿನಿಮಾ ಇದೀಗ, ದೊಡ್ಡ ಅಚ್ಚರಿಯೊಂದನ್ನು ಎಲ್ಲರೆದುರು ತರಲು ಸಿದ್ಧತೆ ನಡೆಸಿದೆ. ಅಂದರೆ ಶಿವಣ್ಣನ ಬರ್ತಡೇಗೆ ಭೈರತಿ ರಣಗಲ್ ಚಿತ್ರದ ಟೀಸರ್ ಬಿಡುಗಡೆ ಆಗಲಿದೆ.
ಗೀತಾ ಪಿಕ್ಚರ್ಸ್ ಅಡಿಯಲ್ಲಿ ಭೈರತಿ ರಣಗಲ್ ಸಿನಿಮಾವನ್ನು ಗೀತಾ ಶಿವರಾಜಕುಮಾರ್ ನಿರ್ಮಾಣ ಮಾಡುತ್ತಿದ್ದಾರೆ. ವೇದ ಸಿನಿಮಾ ಯಶಸ್ಸಿನ ಬಳಿಕ ಗೀತಾ ಪಿಕ್ಚರ್ಸ್ ನಿರ್ಮಾಣ ಮಾಡ್ತಿರುವ ಎರಡನೇ ಸಿನಿಮಾ ಇದು.
ಅಂದಹಾಗೆ ಮಫ್ತಿ ಸಿನಿಮಾದ ಪ್ರೀಕ್ವೆಲ್ ಇದಾಗಿದ್ದು, ನರ್ತನ್ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರುತ್ತಿದೆ. ಈ ಚಿತ್ರದಲ್ಲಿ ಲಾಯರ್ ಆಗಿ ಎದುರಾಗಿದ್ದಾರೆ ಶಿವಣ್ಣ. ಆನಂದ್ ಆಡಿಯೋ ಸಂಸ್ಥೆ ಭೈರತಿ ರಣಗಲ್ ಚಿತ್ರದ ಆಡಿಯೋ ಹಕ್ಕುಗಳನ್ನು ದೊಡ್ಡ ಮೊತ್ತಕ್ಕೆ ಪಡೆದುಕೊಂಡಿದೆ. ಈ ವರ್ಷ ತೆರೆಕಾಣುತ್ತಿರುವ ಕನ್ನಡದ ದೊಡ್ಡ ಸಿನಿಮಾ ಇದು.
ಕೆಲ ಮೂಲಗಳ ಪ್ರಕಾರ, ಭೈರತಿ ರಣಗಲ್ ಚಿತ್ರದ ಆಡಿಯೋ ಹಕ್ಕನ್ನು ಬಹುಕೋಟಿ ಕೊಟ್ಟು ಖರೀದಿಸಿದೆಯಂತೆ ಆನಂದ್ ಆಡಿಯೋ. ಇನ್ನೇನು ಶೀಘ್ರದಲ್ಲಿ ಬಿಡುಗಡೆ ದಿನಾಂಕ ಘೋಷಣೆ ಮಾಡಲಿದ್ದು, ಚಿತ್ರಮಂದಿರದಲ್ಲಿ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ಸಿನಿಮಾ ರಿಲೀಸ್ ಆಗಲಿದೆ.