- ರೇಣುಕಾ ಸ್ವಾಮಿಯ ಶವವನ್ನು ಎಸೆದು, ಕೊಲೆ ಆರೋಪವನ್ನು ಹೊತ್ತುಕೊಳ್ಳಲು ಮೂವರಿಗೆ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ನೀಡಿದ್ದಾರೆ.
- ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಆರೋಪದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿ 13 ಜನರ ಬಂಧನವಾಗಿದೆ.
ನಿನ್ನೆ ರಾತ್ರಿ ದರ್ಶನ್ ಮತ್ತು ಅವರ ಗ್ಯಾಂಗ್ ಜೈಲಿನಲ್ಲಿಯೇ ಸಮಯ ಕಳೆದಿದೆ. ಈ ನಡುವೆ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಹಲವು ವಿಷಯಗಳು ಬೆಳಕಿಗೆ ಬರುತ್ತಿವೆ.
ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್ನಲ್ಲಿ ಇರಿಸಿಕೊಂಡು ದರ್ಶನ್ ಮತ್ತು ಗ್ಯಾಂಗ್ ಹಲ್ಲೆ ನಡೆಸಿದ್ದರು. ಹಲ್ಲೆಯಿಂದ ರೇಣುಕಾ ಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದ್ರು. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.
ಹಣ ಪಡೆದ ಆ ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ಸತ್ಯಾಂಶ ಹೊರ ಬಂದಿದೆ.