- ದರ್ಶನ್ ಸೇರಿ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅಂತ್ಯ
- ದರ್ಶನ್ & ಗ್ಯಾಂಗ್ ಅನ್ನು ಇಂದು ಕೋರ್ಟ್ ಹಾಜರುಪಡಿಸಲಾಗುತ್ತೆ
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಿರಂತರವಾಗಿ ವಿಚಾರಣೆಯ ಎದುರಿಸುತ್ತಿರುವ ದರ್ಶನ್ ಹಾಗೂ ಇತರೆ ನಾಲ್ವರು ಆರೋಪಿಗಳು ಇವತ್ತು ಜೈಲು ಸೇರೋದು ಬಹುತೇಕ ಖಾಯಂ ಆಗಿದೆ. ಈ ಪ್ರಕರಣದ ನಾಲ್ವರು ಆರೋಪಿಗಳ ಪೊಲೀಸ್ಕಸ್ಟಡಿ ಇಂದಿಗೆ ಅಂತ್ಯವಾಗಲಿದೆ. ದರ್ಶನ್ ಹಾಗೂ ಅವರ ಗ್ಯಾಂಗ್ ಅನ್ನು ಕೋರ್ಟ್ ಹಾಜರುಪಡಿಸಲಾಗುತ್ತೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಾದ ದರ್ಶನ್, ವಿನಯ್, ಧನರಾಜ್, ಪ್ರದೋಶ್ ಕಸ್ಟಡಿ ಅವಧಿ ಅಂತ್ಯವಾಗಲಿದ್ದು, ಕೋರ್ಟ್ ಮುಂದೇ ಹಾಜರುಪಡಿಸಿ ಪರಪ್ಪನ ಅಗ್ರಹಾರಕ್ಕೆ ಕಳುಹಿಸಲು ಪೊಲೀಸರು ತಯಾರಿ ನಡೆಸಿದ್ದಾರೆ.