ರೇಣುಕಾಸ್ವಾಮಿ ಹತ್ಯೆ ಕೇಸಲ್ಲಿ ನಟ ದರ್ಶನ್, ಪವಿತ್ರ ಗೌಡ ಸೇರಿದಂತೆ ಇತರೆ 17 ಆರೋಪಿಗಳಿಗೆ ಮತ್ತೆ ಜೈಲೇ ಗತಿಯಾಗಿದೆ. ನಟ ದರ್ಶನ್ ಸೇರಿ ಹಲವು ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಮತ್ತೆ 14 ದಿನ ವಿಸ್ತರಣೆ ಮಾಡಿ ಕೋರ್ಟ್ ಆದೇಶ ನೀಡಿದೆ. ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ ಮಾಡುವಂತೆ ಎಎಸ್ಪಿ ರಿಮಾಂಡ್ ಅರ್ಜಿ ಸಲ್ಲಿಕೆ ಮಾಡಿದ್ದರಿಂದ ಬೆಂಗಳೂರಿನಲ್ಲಿರುವ ಆರ್ಥಿಕ ಅಪರಾಧಗಳ ಕೋರ್ಟ್ ನ್ಯಾಯಾಧೀಶರು ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ.
ಪೊಲೀಸ್ ಕಸ್ಟಡಿ ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ದರ್ಶನ್ ಸೇರಿ ಹಲವು ಆರೋಪಿಗಳ ಅವಧಿಯು ಇಂದು ಮುಕ್ತಾಯಗೊಂಡ ಕಾರಣ ವಿಡಿಯೊ ಕಾನ್ಫರೆನ್ಸ್ ಮೂಲಕ ಜಡ್ಜ್ ಎದುರು ಆರೋಪಿಗಳನ್ನು ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜುಲೈ 18ರವರೆಗೆ ನ್ಯಾಯಾಂಗ ಬಂಧನಕ್ಕೆ ವಹಿಸಿ ಆದೇಶ ಹೊರಡಿಸಿದರು. ಇದರಿಂದಾಗಿ ದರ್ಶನ್ ಹಾಗೂ ಗ್ಯಾಂಗ್ ಮತ್ತೆ ಜೈಲುಪಾಲಾಗಿದ್ದಾರೆ.