1) ಪ್ರಕರಣದ ಎ1 ರಿಂದ ಎ17 ಆರೋಪಿಗಳು ಕೊಲೆ ಮತ್ತು ಸಾಕ್ಷಿನಾಶಪಡಿಸಿದಂತೆ ಒಂದು ಗಂಭೀರ ಪ್ರಕರಣದಲ್ಲಿ ಭಾಗಿಯಾಗಿ ಕೃತ್ಯ ವೆಸಗಿದ್ದು ಇವರುಗಳಿಗೆ ಕಾನೂನಿನ ಮೇಲೆ ಕಿಂಚಿತ್ ಗೌರವ ಇಲ್ಲದೇ ಇರುವುದು ಈವರೆಗಿನ ಸಾಕ್ಷ್ಯಾಧಾರಗಳಿಂದ ದೃಢಪಟ್ಟಿರುತ್ತದೆ.
2) ಎಲ್ಲಾ ಎ1 ರಿಂದ ಎ17 ಆರೋಪಿಗಳು ಸಮಾನ ಉದ್ದೇಶದಿಂದ ಕೃತ್ಯ ವೆಸಗಲು ಒಳಸಂಚು ರೂಪಿಸಿರುವುದು ಮತ್ತು ಕೃತ್ಯ ನಡೆದ ನಂತರ ಭೌತಿಕ, ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಗಳನ್ನು ಈಗಾಗಲೇ ನಾಶಪಡಿಸಿರುವುದು ಮತ್ತು ನಾಶಪಡಿಸಲು ಪ್ರಯತ್ನಿಸಿರುವುದು ತನಿಖೆಯಲ್ಲಿ ದೃಢಪಟ್ಟಿರುತ್ತದೆ.
3) ಪ್ರಕರಣದ ತನಿಖಾ ಕಾಲದಲ್ಲಿ ಅಮಾನತ್ತು ಪಡಿಸಿಕೊಂಡು ಪರಿಶೀಲಿಸಲಾದ ತಾಂತ್ರಿಕ ಸಾಕ್ಷ್ಯಾಧಾರಗಳಲ್ಲಿ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದ್ದು ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಪರಿಶೀಲನೆಗೆ ಕಳುಹಿಸಿದ್ದು ವರದಿ ಸಂಗ್ರಹಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.
4) ಪ್ರಕರಣವು ಹಾಲಿ ತನಿಖೆಯಲ್ಲಿದ್ದು ಪ್ರಕರಣದಲ್ಲಿ ಎಲ್ಲಾ ಆರೋಪಿಗಳ ಕೃತ್ಯದಲ್ಲಿನ ಅವರ ಸಂಪೂರ್ಣ ಪಾತ್ರದ ಬಗ್ಗೆ ಹೆಚ್ಚಿನ ವಿಷಯಗಳನ್ನು ತಿಳಿಯಬೇಕಾಗಿದ್ದು ಈ ಬಗ್ಗೆ ತನಿಖೆ ಮುಂದುವರೆದಿರುತ್ತದೆ.
5) ಪ್ರಕರಣದಲ್ಲಿ ಈವರೆಗೆ 83,65,500/- ರೂಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದು ಸದರಿ ಹಣವನ್ನು ಆರೋಪಿಗಳಿಗೆ ನೀಡಿರುವ ವ್ಯಕ್ತಿಗಳನ್ನು ವಿಚಾರಣೆಗೊಳಪಡಿಸಿ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ. ಹಾಗೂ ಹಣದ ಮೂಲದ ಬಗ್ಗೆ ಮಾಹಿತಿಯನ್ನು ಸಂಗ್ರಹಿಸಬೇಕಾಗಿರುತ್ತದೆ.
6) ಪ್ರಕರಣದ ತನಿಖಾ ಕಾಲದಲ್ಲಿ ಅಮಾನತ್ತು ಪಡಿಸಿಕೊಂಡು ಪರಿಶೀಲಿಸಲಾದ ತಾಂತ್ರಿಕ ಸಾಕ್ಷ್ಯಾಧಾರಗಳಲ್ಲಿ ಎಲ್ಲಾ ಆರೋಪಿಗಳು ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡು ಬಂದಿದ್ದು ಇನ್ನೂ ಹಲವಾರು ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯಾಧಾರಗಳನ್ನು ಪರಿಶೀಲನೆಗೆ ಕಳುಹಿಸಿದ್ದು ವರದಿ ಸಂಗ್ರಹಿಸಿ ಹೆಚ್ಚಿನ ತನಿಖೆಯನ್ನು ಕೈಗೊಳ್ಳಬೇಕಾಗಿರುತ್ತದೆ.
7) ಪ್ರತ್ಯಕ್ಷ ಸಾಕ್ಷಿದಾರರಿಂದ ಎ-15 ಹಾಗೂ ಎ17 ಆರೋಪಿಗಳು ಸೇರಿದಂತೆ ಇತರೆ ಆರೋಪಿಗಳ ಗುರುತಿನ ಕವಾಯತನ್ನು ಕಾರ್ಯನಿರ್ವಾಹಕ ದಂಡಾಧಿಕಾರಿಗಳಿಂದ ನಡೆಸಬೇಕಾಗಿರುತ್ತದೆ. ಈ ಹಂತದಲ್ಲಿ ಆರೋಪಿಗಳಿಗೆ ಜಾಮೀನು ನೀಡಿದಲ್ಲಿ ಪ್ರಕರಣದ ತನಿಖೆಗೆ ಆಡಚಣೆ ಉಂಟಾಗುತ್ತದೆ.
8) ಪ್ರಕರಣದಲ್ಲಿ ಆರೋಪಿಗಳು ಕೃತ್ಯಕ್ಕೆ ಉಪಯೋಗಿಸಿದ್ದ ಹಾಗೂ ಸಾಕ್ಷ್ಯ ನಾಶಕ್ಕೆ ಉಪಯೋಗಿಸಿದ್ದ ಮತ್ತು ಮೃತದೇಹವನ್ನು ವಿಲೇವಾರಿ ಮಾಡಲು ಉಪಯೋಗಿಸಿದ್ದ ವಾಹನಗಳನ್ನು ಆರ್.ಟಿ.ಓ ಅಧಿಕಾರಿಗಳಿಂದ ಪರಿಶೀಲನೆ ಮಾಡಿಸಿ ಪರಿಶೀಲನಾ ವರದಿಯನ್ನು ಪಡೆದುಕೊಳ್ಳಬೇಕಾಗಿರುತ್ತದೆ. ವಾಹನ ಮಾಲೀಕರುಗಳ ವಿವರಗಳನ್ನು ಪಡೆದುಕೊಂಡು ಮೂಲ ಮಾಲೀಕರುಗಳ ಹೇಳಿಕೆಗಳನ್ನು ಪಡೆದುಕೊಳ್ಳಬೇಕಾಗಿರುತ್ತದೆ.
9) ಈವರೆಗೆ 83.65 ಲಕ್ಷ ವಶ ಪಡಿಸಿಕೊಂಡಿದ್ದು ಹಣದ ಮೂಲದ ಬಗ್ಗೆ ತನಿಖೆ ಮಾಡಬೇಕಿದೆ. ಜೊತೆಗೆ ಕೆಲ ತಾಂತ್ರಿಕ ಮತ್ತು ವೈಜ್ಞಾನಿಕ ಸಾಕ್ಷ್ಯ ಪರಿಶೀಲಿಸಿ ಕ್ರಮ ಕೈಗೊಳ್ಳಬೇಕಿದೆ.
10) ಆರೋಪಿ 8 ರವಿಶಂಕರ್, 15 ಕಾರ್ತಿಕ್, 17 ನಿಖಿಲ್ ಸೇರಿದಂತೆ ಇತರೆ ಆರೋಪಿಗಳ ಐಡೆಂಟಿಫಿಕೇಷನ್ ಪರೇಡ್ ಮಾಡಬೇಕಿದೆ. ಜೊತೆಗೆ ಆರೋಪಿಗಳು ಬೇರೆ ಬೇರೆ ವ್ಯಕ್ತಿಗಳ ಹೆಸರಿನಲ್ಲಿ ಸಿಮ್ ಖರೀದಿ ಮಾಡಿದ್ದು ಪರಿಶೀಲನೆ ಮಾಡಬೇಕಿದೆ.
11) ಪ್ರತ್ಯಕ್ಷ ಮತ್ತು ಪರೋಕ್ಷ ಸಾಕ್ಷಿಗಳನ್ನು ಸಿಆರ್ ಪಿಸಿ 164 ಸ್ಟೇಟ್ಮೆಂಟ್ ಮಾಡಬೇಕಿದೆ. ಕೃತ್ಯಕ್ಕೆ ಬಳಕೆ ಮಾಡಿದೆ ವಾಹನಗಳ ಕುರಿತು ಆರ್ಟಿಓ ಇಂದ ಮಾಹಿತಿ ಪಡೆದು ಪರಿಶೀಲಿಸಬೇಕಿದೆ.
12) ಹೈದರಬಾದ್ಗೆ ಮೊಬೈಲ್ ರಿಟ್ರೀವ್ಗೆ ಕಳುಹಿಸಿದ್ದು ವರದಿ ಪಡೆದುಕೊಳ್ಳಬೇಕಿದೆ ಹಾಗೂ ಇನ್ನೂ ಕೆಲ ಆರೋಪಿಗಳ ಮೊಬೈಲ್ ರಿಟ್ರೀವ್ ಮಾಡಿಸಬೇಕಿದೆ. ಸಿಸಿ ಟಿವಿ, ಡಿವಿಆರ್ ರಿಟ್ರೀವ್ ಮಾಡಬೇಕಿದೆ, ಎಫ್ಎಸ್ ಎಲ್ ಗೆ ಕಳುಹಿಸಿ ವರದಿ ಪಡೆಯಬೇಕಿದೆ. ಇನ್ನೂ ಕೆಲ ಸಾಕ್ಷಿಗಳ ಹೇಳಿಕೆ ಸೆಕ್ಷನ್ 164 ಅಡಿ ಹೇಳಿಕೆ ದಾಖಲಿಸಿಕೊಳ್ಳಬೇಕಿದೆ
13) ಕೃತ್ಯ ಮತ್ತು ಕೃತ್ಯಕ್ಕೆ ಸಂಬಂಧಿಸಿದ ನಂತರದ ಹಲವು ವ್ಯಕ್ತಿಗಳನ್ನು ಸಂಪರ್ಕಿಸಿರುವುದನ್ನು ಗುರುತಿಸಬೇಕಿದೆ. ಸಾಕ್ಷ್ಯ ನಾಶದ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕಿದೆ. ಕೇಸ್ನ ಆರೋಪಿಗಳು ಪ್ರಭಾವಿ ಮತ್ತು ಅಭಿಮಾನಿ ಬಳಗ ಹೊಂದಿದ್ದು, ಪ್ರತ್ಯಕ್ಷ ಮತ್ತು ಪರೋಕ್ಷ ಸಾಕ್ಷಿಗಳನ್ನು ಪರಿಗಣಿಸಬೇಕಿದೆ.
ಈ ಸಮಯದಲ್ಲಿ ಆರೋಪಿಗಳಿಗೆ ಜಾಮೀನು ಸಿಕ್ಕಿದ್ದಲ್ಲಿ ಸಾಕ್ಷ್ಯ ನಾಶ ಮತ್ತು ತನಿಖೆ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ. ಹೀಗಾಗಿ ನ್ಯಾಯಾಂಗ ಬಂಧನದಲ್ಲೇ ಆರೋಪಿಗಳನ್ನು ಮುಂದುವರೆಸಲು ಪೊಲೀಸರು ಎಸ್ಪಿಪಿ ಮೂಲಕ ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.