ನಟ ದರ್ಶನ್ ಮತ್ತು ನಟಿ ಪವಿತ್ರಗೌಡ ಜಾಮೀನು ಭವಿಷ್ಯ ಇಂದು ನಿರ್ಧಾರವಾಗಲಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಆರೋಪದಲ್ಲಿ ಜೈಲಯ ಸೇರಿರುವ ನಟ ಹಾಗೂ ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಿಚಾರಣೆ ನಡೆಯುತ್ತಲೇ ಇದ್ದು, ನಟ ದರ್ಶನ್ ಸೇರಿದಂತೆ ಆರು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಹೈಕೋರ್ಟ್ ನ್ಯಾ. ವಿಶ್ವಜಿತ್ ಶೆಟ್ಟಿ ಅವರ ಪೀಠದಲ್ಲಿ ನಡೆಯಲಿರೋ ವಿಚಾರನೆ ಏನಾಗುತ್ತದೆ ಎನ್ನುವ ಕುತೂಹಲ ಎಲ್ಲರಲ್ಲಿದೆ. ಈಗಾಗಲೇ ದರ್ಶನ್ ಪರ ವಕೀಲ ಸಿವಿ ನಾಗೇಶ್ ಅವರು ವಾದ ಮಂಡಿಸಿದ್ದಾರೆ.
ಈ ಪ್ರಕರಣದ ಉಳಿದ ಆರೋಪಿಗಳ ಪರವಾಗಿ ಅವರ ವಕೀಲರು ಇಂದು ವಾದ ಮಂಡಿಸಲಿದ್ದಾರೆ ಎನ್ನಲಾಗಿದೆ. ಪವಿತ್ರಾಗೌಡ ಪರವಾಗಿ ಹಿರಿಯ ವಕೀಲ ಟಾಮಿ ಸೆಬಾಸ್ಟಿಯನ್ ವಾದಿಸಲಿದ್ದಾರೆ. ಆ ಬಳಿ ಪ್ರಕರಣದ ಸ್ಪೆಷಲ್ ಪಬ್ಲಿಕ್ ಪ್ರಾಸಿಕ್ಯೂಟರ್ ಆಗಿರುವ ಪ್ರಸನ್ನ ಕುಮಾರ್ ವಾದ ಮಾಡಲಿದ್ದಾರೆ.
ಆರು ಆರೋಪಿಗಳ ಜಾಮೀನಿಗೆ ಆಕ್ಷೇಪಿಸಿ ಎಸ್ಪಿಪಿ ಪ್ರಸನ್ನ ಕುಮಾರ್ ವಾದ ಮಾಡಲಿದ್ದಾರೆ. ಮಧ್ಯಾಹ್ನದ ಬಳಿಕ ಹೈಕೋರ್ಟ್ನಲ್ಲಿ ಜಾಮೀನು ಅರ್ಜಿ ವಿಚಾರನೆ ನಡೆಯಲಿದೆ.