ರೇಣುಕಾಸ್ವಾಮಿ ಕೊಲೆ ಪ್ರಕರಣದ ತನಿಖೆ ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದೆಯೆಂದು ಬೆಂಗಳೂರು ಪೊಲೀಸ್ ಕಮಿಷನರ್ ಬಿ. ದಯಾನಂದ ಹೇಳಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ಗೆ ಸಂಬಂಧಿಸಿದ ಮೌಖಿಕ, ಸಾಂದರ್ಭಿಕ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಅವುಗಳನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ ಮತ್ತು ಅಲ್ಲಿಂದ ಸುಮಾರು ಶೇಕಡ 70 ರಷ್ಟು ವರದಿಗಳು ತಮ್ಮ ಕೈ ಸೇರಿವೆ ಎಂದು ಕಮಿಷನರ್ ಹೇಳಿದ್ದಾರೆ. ಎಲೆಕ್ಟ್ರಾನಿಕ್ ಉಪಕರಣಗಳ ಸಾಕ್ಷ್ಯಗಳನ್ನು ಹೈದರಾಬಾದ್ ಎಫ್ಎಸ್ಎಲ್ ಗೆ ಕಳಿಸಲಾಗಿದ್ದು ಅಲ್ಲಿಂದ ವರದಿಗಳು ಕೆಲ ದಿನಗಳಲ್ಲಿ ತಮ್ಮನ್ನು ತಲುಪಲಿವೆ. ಎಲ್ಲ ವರದಿಗಳು ಸಂಪೂರ್ಣವಾಗಿ ಬಂದ ಬಳಿಕ ಮತ್ತೊಮ್ಮೆ ಸಾಕ್ಷಿಗಳಿಂದ ಸ್ಪಷ್ಟೀಕರಣ ಪಡೆಯಲಾಗುವುದು ಬಳಿಕ ಪ್ರಕರಣದ ಚಾರ್ಜ್ಶೀಟನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಕಮಿಷನರ್ ದಯಾನಂದ ಹೇಳಿದ್ದಾರೆ.