ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ದರ್ಶನ್ರನ್ನು ಮಗ ವಿನೀಶ್ ಮತ್ತೆ ಭೇಟಿ ಮಾಡಿದ್ದಾರೆ. ಜೈಲಿನಲ್ಲಿರುವ ದರ್ಶನ್ ಅವರನ್ನು ಕುಟುಂಬದವರು ಈವರೆಗೂ ಮೂರು ಬಾರಿ ಭೇಟಿ ಮಾಡಿದ್ದಾರೆ.
ಇಂದು ದರ್ಶನ್ ಪತ್ನಿ ವಿಜಯಲಕ್ಷ್ಮಿ, ಮಗ ವಿನೀಶ್ ಬಂದು ದರ್ಶನ್ ಅವರನ್ನು ಭೇಟಿ ಮಾಡಿ, ಧೈರ್ಯ ಹೇಳಿದ್ದಾರೆ. ಈ ವೇಳೆ ಜೈಲಿನಲ್ಲಿ ಅಪ್ಪನ ಸ್ಥಿತಿ ಕಂಡು ಮಗ ವಿನೀಶ್ ಕಣ್ಣೀರು ಹಾಕಿದ್ದಾನೆ. ಮಗನನ್ನು ಅಪ್ಪಿಕೊಂಡು ದರ್ಶನ್ ಕೂಡ ಕಣ್ಣೀರು ಹಾಕಿ ಅಳಬೇಡ ಕಣೋ ಕಂದ ಬೇಗ ವಾಪಸ್ ಬಂದುಬಿಡ್ತೀನಿ ಅಂತ ಮಗನಿಗೆ ಸಮಾಧಾನ ಹೇಳಿದ್ದಾರಂತೆ. ಅಪ್ಪ-ಮಗನನ್ನು ನೋಡಿ ಪತ್ನಿ ವಿಜಯಲಕ್ಷ್ಮೀ ಕೂಡ ಭಾವುಕರಾಗಿದ್ದಾರೆ ಎನ್ನಲಾಗಿದೆ.