- ರೇಣುಕಾಸ್ವಾಮಿ ಕೊಲೆ ಪ್ರಕರಣ
- ಪವಿತ್ರಾಗೆ ಲಿಪ್ಸ್ಟಿಕ್ ಹಚ್ಚಲು ಅವಕಾಶ ಕೊಟ್ಟ ಮಹಿಳಾ PSIಗೆ ನೋಟಿಸ್
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವ ಪವಿತ್ರಗೌಡ ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಹೀಗಿರುವಾಗ ಪವಿತ್ರಗೌಡಗೆ ಮೇಕಪ್ ಮಾಡಲು ಅವಕಾಶ ನೀಡಿದ ಪಿಎಸ್ಐಗೂ ಕೂಡ ಸಂಕಷ್ಟ ಎದುರಾಗಿದೆ. ಪವಿತ್ರಗೌಡ ಮನೆ ಮಹಜರು ಮಾಡುವ ವೇಳೆ ಪವಿತ್ರಗೌಡ ಕೂಡ ಇದ್ದರು. ಪವಿತ್ರಾಗೆ ಲಿಪ್ಸ್ಟಿಕ್ ಹಚ್ಚಲು ಪಿಎಸ್ಐ ಅವಕಾಶ ಕೊಟ್ಟಿದ್ದರು. ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ವಿಜಯನಗರದ ಮಹಿಳಾ ಪಿಎಸ್ಐ ನೇತ್ರಾ ಅವರಿಗೆ ನೋಟಿಸ್ ನೀಡಲಾಗಿದೆ.
ಎ1 ಆರೋಪಿಯಾಗಿರುವ ಪವಿತ್ರಾ ಗೌಡಳನ್ನ ಜೂನ್ 15ರಂದು ಸ್ಥಳ ಮಹಜರು ಮಾಡಲೆಂದು ಆರ್.ಆರ್ ನಗರದಲ್ಲಿರುವ ಆಕೆಯ ಮನೆಗೆ ಪೊಲೀಸರು ಕರೆದುಕೊಂಡು ಹೋಗಿದ್ದರು. ಈ ವೇಳೆ ಮನೆ ಪವಿತ್ರಾ ಗೌಡ ಲಿಪ್ಸ್ಸ್ಟಿಕ್ ಹಚ್ಚಿಕೊಂಡು, ಮುಖಕ್ಕೆ ಮೇಕಪ್ ಮಾಡಿಕೊಂಡು ಬಂದಿದ್ದರು. ಮಹಜರಿಗೆ ಕರೆದುಕೊಂಡು ಹೋಗಿದ್ದ ವೇಳೆ ಮೇಕಪ್ ಮಾಡಲು ಅವಕಾಶ ಮಾಡಿಕೊಟ್ಟಿದ್ದು ಯಾಕೆ? ಇಲ್ಲಿ ಕರ್ತವ್ಯ ಲೋಪವಾಗಿರುವುದು ಕಂಡು ಬರುತ್ತಿದೆ.