ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟಿ ಪವಿತ್ರಾ ಗೌಡ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯವು, ಬುಧವಾರಕ್ಕೆ ಮುಂದೂಡಿದೆ.
ಪ್ರಕರಣದಲ್ಲಿ ಮೊದಲ ಆರೋಪಿಯಾಗಿರುವ ಪವಿತ್ರಾಗೌಡ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಹಲವು ಬಾರಿ ಮುಂದೂಡಲಾಗಿದೆ. ಈ ಹಿಂದೆ ಮಂಗಳವಾರಕ್ಕೆ ಮುಂದೂಡಲಾಗಿತ್ತು. ಅದರಂತೆ ಮಂಗಳವಾರ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಪವಿತ್ರಾ ಗೌಡ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದೆ. ಇದೀಗ ಬುಧವಾರ ಮಧ್ಯಾಹ್ನ 2.45ಕ್ಕೆ ವಿಚಾರಣೆ ಮುಂದೂ ಡ ಲಾಗಿದೆ. ಪವಿತ್ರಾ ಗೌಡ ಸದ್ಯ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ.