ಸ್ಯಾಂಡಲ್ವುಡ್ನಲ್ಲಿ ನಟನೆ, ನಿರ್ದೇಶನದಲ್ಲೂ ಸೈ ಎನಿಸಿಕೊಂಡಿರುವ ರಿಷಬ್ ಶೆಟ್ಟಿ ಅವರು ಹುಟ್ಟುಹಬ್ಬದ ಸಂಭ್ರಮದಲ್ಲಿದ್ದು, 41ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಕಾಂತಾರ ಪ್ರೀಕ್ವೆಲ್ ಚಿತ್ರಕ್ಕಾಗಿ ಹುಟ್ಟೂರಿನಲ್ಲಿ ಸದ್ಯ ರಿಷಬ್ ಬೀಡು ಬಿಟ್ಟಿದ್ದಾರೆ. ಸದ್ಯ ಕಾಂತಾರ ಪ್ರೀಕ್ವೆಲ್ ಸಿನಿಮಾದ ಕೆಲಸದಲ್ಲಿ ನಟ ಸಖತ್ ಬ್ಯುಸಿಯಾಗಿದ್ದಾರೆ.
ಪ್ರೀತಿಯ ಪತಿ ರಿಷಭ್ ಶೆಟ್ಟಿಯ ಹುಟ್ಟು ಹಬ್ಬಕ್ಕೆ ಪತ್ನಿ ಪ್ರಗತಿ ಶೆಟ್ಟಿ ವಿಶೇಷವಾಗಿ ಶುಭಕೋರಿದ್ದಾರೆ. ನಟ ರಿಷಬ್ ಶೆಟ್ಟಿ ಪತ್ನಿ ಅವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ಪತಿಯ ಸಿನಿ ಜರ್ನಿಯ ಬಗ್ಗೆ ಸಣ್ಣ ವಿಡಿಯೋ ಕ್ಲಿಪ್ ಅನ್ನು ಶೇರ್ ಮಾಡಿಕೊಂಡಿದ್ದಾರೆ.
ಜೊತೆಗೆ ನನ್ನ ಜೀವನದ ಆಧಾರಸ್ತಂಭಕ್ಕೆ ಜನ್ಮದಿನದ ಶುಭಾಶಯಗಳು. ನೀವು ಎಂತಹ ಅದ್ಭುತ ವ್ಯಕ್ತಿ ಎಂದು ನಾನು ಜಗತ್ತಿಗೆ ಹೇಳಲು ಬಯಸುತ್ತೇನೆ. ನಿಮ್ಮನ್ನು ನಿಜವಾಗಿಯೂ ತಿಳಿದಿರುವವರು ಅದೃಷ್ಟವಂತರು. ನಿಮ್ಮ ಶಕ್ತಿ, ಬುದ್ಧಿವಂತಿಕೆ ಮತ್ತು ಪ್ರೀತಿ ಪ್ರತಿದಿನ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ. ನಾವು ಒಟ್ಟಿಗೆ ಇರುವುದಕ್ಕಾಗಿ ನಾನು ಪ್ರತಿದಿನ ದೇವರಿಗೆ ಕೃತಜ್ಞನಾಗಿದ್ದೇನೆ ಎಂದು ಪ್ರಗತಿ ಶೆಟ್ಟಿ ಬಣ್ಣಿಸಿದ್ದಾರೆ.