ಐಶ್ವರ್ಯಾ ರೈ ಅವರು ತಮ್ಮ ಮಗಳು ಆರಾಧಯ ಅವರನ್ನು ತುಂಬಾನೇ ಪ್ರೀತಿಯಿಂದ ಬೆಳೆಸಿದ್ದಾರೆ. ಕೆಲವರು ಪ್ರೀತಿ ಕೊಟ್ಟಿದ್ದರೂ ಸಂಸ್ಕಾರ ಕೊಟ್ಟಿರುವುದಿಲ್ಲ. ಆದರೆ ಐಶ್ವರ್ಯಾ ಹಾಗಲ್ಲ. ಪ್ರೀತಿಯ ಜೊತೆಗೆ ಸಂಸ್ಕಾರವನ್ನು ನೀಡಿದ್ದಾರೆ. ಇದಕ್ಕೆ ಸಾಕ್ಷಿ ಆಗುವಂಥ ಘಟನೆ ಸೈಮಾದಲ್ಲಿ ನಡೆದಿದೆ. ಕನ್ನಡದ ಸ್ಟಾರ್ ಹೀರೋ ಶಿವರಾಜ್ಕುಮಾರ್ ಅವರನ್ನು ನೋಡುತ್ತಿದ್ದಂತೆ ಆರಾಧ್ಯ ಅವರು ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗಿದೆ.
ಐಶ್ವರ್ಯಾ ರೈ ಹಾಗೂ ಅವರ ಮಗಳು ಆರಾಧ್ಯಾ ಇತ್ತೀಚೆಗೆ ಸೈಮಾ ಅವಾರ್ಡ್ಸ್ಗೆ ತೆರಳಿದ್ದರು. ದುಬೈನಲ್ಲಿ ಈ ಕಾರ್ಯಕ್ರಮ ನಡೆದಿತ್ತು. ಕನ್ನಡದ ಹಲವು ಹೀರೋಗಳು ಇದರಲ್ಲಿ ಭಾಗಿ ಆಗಿದ್ದರು. ಶಿವರಾಜ್ಕುಮಾರ್ ಕೂಡ ಈ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಈ ವೇಳೆ ಐಶ್ವರ್ಯಾ ಹಾಗೂ ಶಿವರಾಜ್ಕುಮಾರ್ ಅವರ ಭೇಟಿ ಆಗಿದೆ.
ಶಿವರಾಜ್ಕುಮಾರ್ ಹಾಗೂ ವಿಕ್ರಂ ಭೇಟಿ ಆದರು. ಈ ವೇಳೆ ಅಲ್ಲೇ ಇದ್ದ ಐಶ್ವರ್ಯಾ ರೈ ಅವರು ಶಿವರಾಜ್ಕುಮಾರ್ ಅವರನ್ನು ನೋಡುತ್ತಿದ್ದಂತೆ ಓಡೋಡಿ ಬಂದು ಶಿವಣ್ಣನಿಗೆ ಶೇಕ್ಹ್ಯಾಂಡ್ ಮಾಡಿದರು. ಇದರ ಜೊತೆಗೆ ಅಲ್ಲೇ ಇದ್ದ ಮಗಳಿಗೆ ಶಿವರಾಜ್ಕುಮಾರ್ ಅವರನ್ನು ಪರಿಚಯಿಸಿದರು. ಆಗ ಆರಾಧ್ಯಾ ಅಲ್ಲಿಯೇ ಶಿವಣ್ಣನ ಕಾಲಿಗೆ ಬಿದ್ದು ಆಶೀರ್ವಾದ ಪಡೆದರು. ಶಿವಣ್ಣ ಆರಾಧ್ಯಾಗೆ ಒಳ್ಳೆಯದಾಗಲಿ ಎಂದು ಹಾರೈಸಿದರು.
ಆರಾಧ್ಯಾ ಅವರು ಎಲ್ಲೇ ಹೋದರು ತಾಯಿ ಜೊತೆಯಲ್ಲಿ ಕಾಣಿಸಿಕೊಳ್ಳುತ್ತಾರೆ. ಅವರು ತಾಯಿ ಜೊತೆ ಅನೇಕ ಕಾರ್ಯಕ್ರಮಗಳಲ್ಲಿ ಈ ಮೊದಲು ಭಾಗಿ ಆಗಿದ್ದರು. ಸೈಮಾ ಅವಾರ್ಡ್ಸ್ಗೂ ತಾಯಿ ಜೊತೆಯಲ್ಲಿ ಆರಾಧ್ಯಾ ಮಿಂಚಿದ್ದಾರೆ. ಅವರ ಕ್ಯೂಟ್ ಫೋಟೋಗಳು ಈ ಮೊದಲು ವೈರಲ್ ಆಗಿ ಗಮನ ಸೆಳೆದಿದ್ದವು.