ಅನುಪಮಾ ಗೌಡ ಕನ್ನಡ ಕಿರುತೆರೆಯ ಜನಪ್ರಿಯ ನಟಿ ಕಮ್ ನಿರೂಪಕಿ. ಇವರು ಚಾಲೆಂಜಿಂಗ್ ಸ್ಟಾರ್ ದರ್ಶನ ಅಭಿನಯದ ಲೋಕೇಶ್ ಪತ್ರಿಕೆ ಸಿನಿಮಾದ ಮೂಲಕ ಬಾಲ ಕಲಾವಿದೆಯಾಗಿ ಕನ್ನಡ ಹಿತ್ರರಂಗಕ್ಕೆ ಪ್ರವೇಶ ಮಾಡಿದರು. ನಂತರ ಅಕ್ಕ ಎಂಬ ಧಾರಾವಾಹಿ ಮೂಲಕ ಕಿರುತೆರೆಗೆ ಪರಿಚಿತರಾದರು. ಈ ಧಾರಾವಾಹಿಯಲ್ಲಿ ದ್ವಿಪಾತ್ರ ನಿಭಾಹಿಸುವುದರ ಮೂಲಕ ಸೈ ಎನಿಸಿಕೊಂಡರು.
ಕನ್ನಡದ ಬಿಗ್ ರಿಯಾಲಿಟಿ ಶೋ ಬಿಗ್ಬಾಸ್ ಖ್ಯಾತಿಯ ನಟಿ ಅನುಪಮಾ ಗೌಡ ಸದಾ ನಗು ಮುಖದ ಚೆಲುವೆ. ಎಲ್ಲರ ಕಣ್ಣು ಕುಕ್ಕುವಂತೆ ಜೀವನ ಸಾಗಿಸುವ ಗಟ್ಟಿಗಿತ್ತಿ. ಈ ಹಿಂದೆ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರೋ ರಾಜಾ ರಾಣಿ ಶೋನಲ್ಲಿ ನಿರೂಪಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರು.
ಇದರ ಜೊತೆಗೆ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿರೋ ನಟಿ, ನಿರೂಪಕಿ ಅನುಪಮಾ ಗೌಡ ಹೊಸ ವಿಡಿಯೋವೊಂದನ್ನು ಶೇರ್ ಮಾಡಿಕೊಂಡಿದ್ದಾರೆ. ನಟಿ ತನ್ನ ಬೆನ್ನಿನ ಮೇಲೆ ಅವರ ಜೀವನದಲ್ಲಿ ಸ್ಪೆಷಲ್ ಆಗಿರೋ ವ್ಯಕ್ತಿಯ ಚಿತ್ರವನ್ನು ಟ್ಯಾಟೂ ಹಾಕಿಸಿಕೊಂಡಿದ್ದಾರೆ.
ಇದೇ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿವೆ. ಇದೇ ವಿಡಿಯೋವನ್ನು ಶೇರ್ ಮಾಡಿಕೊಂಡ ನಟಿ ಅನುಪಮಾ ಗೌಡ ಅವರು ದೈಹಿಕವಾಗಿ ನಮ್ಮ ಜೊತೆ ಇಲ್ಲ. ಆದರೆ ಅವರು ಶಾಶ್ವತವಾಗಿ ನನ್ನ ಬೆನ್ನ ಹಿಂದೆ ಇರುತ್ತಾರೆ. ಎಂದು ಇನ್ಸ್ಟಾಗ್ರಾಂನಲ್ಲಿ ಬರೆದುಕೊಂಡಿದ್ದಾರೆ. ಇನ್ನು ಈ ವಿಡಿಯೋಗೆ ಸಾಕಷ್ಟು ಇವರ ಫ್ಯಾನ್ಸ್ ಕಾಮೆಂಟ್ಸ್ ಮಾಡ್ತಿದ್ದಾರೆ.