ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಆರೋಪಿಯಾಗಿರೊ ನಟ ದರ್ಶನ್ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಸರ್ಜರಿಗಾಗಿ ಬಿಜಿಎಸ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ದರ್ಶನ್ ಅವರು ತೀವ್ರ ಬೆನ್ನು ನೋವಿನಿಂದ ಬಳಲುತ್ತಿದ್ದರು. ಆದರೆ ಜಾಮೀನು ಸಿಗುತ್ತಿದ್ದಂತೆ ಆಪರೇಷನ್ ಮಾಡಿಸದೇ ದರ್ಶನ್ ಡಿಸ್ಚಾರ್ಜ್ ಆಗಿದ್ದಾರೆ.
ದರ್ಶನ್ ಕುಟುಂಬ ಫಿಸಿಯೋಥೆರಪಿ ಮೂಲಕವೇ ಬೆನ್ನುನೋವು ಗುಣಪಡಿಸಿಕೊಳ್ಳುವ ಪ್ಲ್ಯಾನ್ ಮಾಡಿದೆ, ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದರ್ಶನ್ ಅವರಿ ಡಿಸ್ಚಾರ್ಜ್ ನಂತರ ಪತ್ನಿ ವಿಜಯಲಕ್ಷ್ಮಿ ಅವರ ಫ್ಲಾಟ್ಗೆ ಹೋಗಲಿದ್ದಾರೆ ಎಂದು ಹೇಳಲಾಗಿದೆ. ದರ್ಶನ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುತ್ತಿದ್ದಂತೆ ಅವರ ಸಹೋದರ ದಿನಕರ್ ತೂಗುದೀಪ ಹಾಗೂ ಅವರ ಪತ್ನಿಯೂ ಬಂದಿದ್ದಾರೆ. ಇನ್ನು ದರ್ಶನ್ ಡಿಸ್ಚಾರ್ಜ್ ಪ್ರಕ್ರಿಯೆಗಳು ಆಗಿದ್ದು ಅವರು ಪತ್ನಿಯೊಂದಿಗೆ ಹೊಸಕೆರೆಹಳ್ಳಿ ಫ್ಲಾಟ್ನಲ್ಲಿಯೇ ಉಳಿಯಲಿದ್ದಾರಂತೆ.