ಸ್ಯಾಂಡಲ್ವುಡ್ ನಟ ಡಾಲಿ ಧನಂಜಯ್ ಅವರು ಮದುವೆ ಸಂಭ್ರಮದಲ್ಲಿದ್ದಾರೆ. ಧನಂಜಯ್ ಮತ್ತು ಧನ್ಯತಾ ಜೋಡಿ ಈಗಾಗಲೇ ಕನ್ನಡ ಸಿನಿಮಾದ ನಟ, ನಟಿಯರು, ರಾಜಕೀಯ ಗಣ್ಯರಿಗೆ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಇದೀಗ ಕರ್ನಾಟಕದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಡಾಲಿ ಧನಂಜಯ್ ಅವರು ಮದುವೆ ಪತ್ರಿಕೆ ನೀಡಿದ್ದಾರೆ.
![](https://guaranteenews.com/wp-content/uploads/2025/01/fಹ್ಜಗಜಗಜ.jpg)
ಡಾಲಿ ಧನಂಜಯ್ ಅವರು ಸಿನಿಮಾ ಕೆಲಸಕ್ಕೆ ಬ್ರೇಕ್ ಹಾಹಿ ಮದುವೆ ತಯಾರಿಯಲ್ಲಿ ಬ್ಯುಸಿಯಾಗಿದ್ದಾರೆ. ಈಗಾಗಲೇ ಮಾಜಿ ಪ್ರಧಾನಿ ದೇವೇಗೌಡ, ಡಿಕೆ ಶಿವಕುಮಾರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಕೆ ಸುರೇಶ್ ಸೇರಿದಂತೆ ಅನೇಕ ಗಣ್ಯರನ್ನು ಮದುವೆಗೆ ಆಹ್ವಾನಿಸಿದ್ದಾರೆ.
ಇನ್ನು ಧನ್ಯತಾ ಜೊತೆ ಡಾಲಿ ಧನಂಜಯ್ ಅವರು ಮೈಸೂರಿನಲ್ಲಿ ಹಸೆಮಣೆ ಏರಲಿದ್ದಾರೆ. ಮೈಸೂರಿನ ಅರಮನೆ ಮುಂಭಾಗದ ವಸ್ತುಪ್ರದರ್ಶನ ಮೈದಾನದಲ್ಲಿ ಫೆಬ್ರವರಿ 16ರ ಭಾನುವಾರ ಬೆಳಿಗ್ಗೆ 8:30ಕ್ಕೆ ನಡೆಯಲಿದೆ. ಆರತಕ್ಷತೆ ಅದೇ ಮೈಸೂರಿನ ಅರಮನೆ ಮುಂಭಾಗದ ವಸ್ತುಪ್ರದರ್ಶನ ಮೈದಾನದಲ್ಲಿ ಫೆಬ್ರವರಿ 15ರ ಸಂಜೆ 6 ಗಂಟೆಗೆ ನಡೆಯಲಿದೆ.
ಫೆಬ್ರವರಿ 16 ರಂದು ನಡೆಯಲಿರುವ ಈ ಮದುವೆಗೆ ರಾಜಕೀಯ ಗಣ್ಯರು, ಸಿನಿಮಾ ತಾರೆಯರು ಭಾಗಿಯಾಗಲಿದ್ದಾರೆ. ನಟ ಡಾಲಿ ಧನಂಜಯ್ ನಾಡಪ್ರಭು ಕೆಂಪೇಗೌಡ ಸೇರಿದಂತೆ ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಜೊತೆಗೆ ಹೊಸಬರ ಸಿನಿಮಾಗಳಿಗೆ ತಮ್ಮ ನಿರ್ಮಾಣ ಸಂಸ್ಥೆಯಿಂದ ನಿರ್ಮಾಣ ಕೂಡ ಮಾಡುತ್ತಿದ್ದಾರೆ.