ನಟ ಡಾಲಿ ಧನಂಜಯ ಹಾಗೂ ಧನ್ಯತಾ ಅವರು ಸದ್ಯದಲ್ಲಿಯೇ ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಫೆ 16ರಂದು ಮದುವೆಗೆ ದಿನಾಂಕ ನಿಗದಿಯಾಗಿದ್ದು, ಲಗ್ನ ಪತ್ರಿಕೆಯ ಫೋಟೊವನ್ನು ಅವರು ಸಾಮಾಜಿಕ ಮಾಧ್ಯಮದಲ್ಲಿ ಹಂಕೊಂಡಿದ್ದಾರೆ.ಮದುವೆ ಸಿದ್ಧತೆಯಲ್ಲಿ ಬ್ಯುಸಿಯಾಗಿರೋ ಪ್ರೇಮಪಕ್ಷಿಗಳಿಂದು ಕರುನಾಡ ಚಕ್ರವರ್ತಿ ಖ್ಯಾತಿಯ ಶಿವರಾಜ್ಕುಮಾರ್ ಅವರನ್ನು ತಮ್ಮ ಮದುವೆಗೆ ಆಹ್ವಾನಿಸಿದ್ದಾರೆ.ಶಿವಣ್ಣನನ್ನು ಅವರ ನಿವಾಸದಲ್ಲಿ ಭೇಟಿಯಾದ ಜೋಡಿ, ತಮ್ಮ ಮದುವೆಗೆ ಖ್ಯಾತ ನಟನನ್ನು ಆಹ್ಬಾನಿಸಿದ್ದಾರೆ. ಸೆಂಚುರಿ ಸ್ಟಾರ್ ಜೊತೆ ಉತ್ತಮ ಕ್ಷಣ ಕಳೆದಿದ್ದಾರೆ.
ಡಾಲಿ ಧನ್ಯತಾ ಇತ್ತೀಚೆಗಷ್ಟೇ ತಮ್ಮ ವಿವಾಹದ ಆಮಂತ್ರಣ ಪತ್ರಿಕೆಯ ಪೂಜೆ ಮಾಡಿಸುವ ಮೂಲಕ ಮದುವೆಗೆ ಸಂಬಂಧಿಸಿದ ಕೆಲಸಗಳನ್ನು ಶುರು ಮಾಡಿದ್ದಾರೆ. ಡಾಲಿ ಯಾವುದೇ ಸಿನಿಮಾ ಕೆಲಸಗಳನ್ನು ಶುರು ಮಾಡುವ ಮೊದಲು ಬಂಡೆ ಮಹಾಕಾಳಿ ದೇವಿಯ ಆಶೀರ್ವಾದ ಪಡೆಯುತ್ತಾರೆ. ಅದರಂತೆ, ತಮ್ಮ ಮದುವೆ ಕಾರ್ಯ ಶುರು ಮಾಡುವ ಮೊದಲು ತಮ್ಮ ಭಾವಿ ಪತ್ನಿ ಧನ್ಯತಾ ಅವರ ಜೊತೆ ದೇವಸ್ಥಾನಕ್ಕೆ ಭೇಟಿ ಕೊಟ್ಟು ಮದುವೆ ಆಮಂತ್ರಣ ಪತ್ರಿಕೆಗೆ ಪೂಜೆ ಮಾಡಿಸಿ, ದೇವಿಯ ಆಶೀರ್ವಾದ ಪಡೆದಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಹೆಚ್ಚಿನವರು ತಮ್ಮ ಮದುವೆ ಆಮಂತ್ರಣ ಪತ್ರಿಕೆಯನ್ನು ವಿಭಿನ್ನವಾಗಿ ಡಿಸೈನ್ ಮಾಡಿಸಬೇಕು ಅನ್ನೋ ಆಲೋಚನೆಯಲ್ಲಿ ಇರುತ್ತಾರೆ. ಇನ್ನು, ಸಿನಿಮಾ ಸ್ಟಾರ್ಸ್ ಸದಾ ಕ್ರಿಯೇಟಿವ್ ಆಗಿಯೇ ಯೋಚನೆ ಮಾಡುತ್ತಾರೆ. ಅದರಂತೆ ಡಾಲಿ ತಮ್ಮ ಮದುವೆ ಇನ್ವಿಟೇಷನ್ ಅನ್ನು ಸಖತ್ತಾಗೆ ಪ್ಲಾನ್ ಮಾಡಿದ್ದಾರೆ. ಓಲ್ಡ್ ಇಸ್ ಗೋಲ್ಡ್ ಥೀಮ್ನಲ್ಲಿ ಅಂದರೆ ಅಂಚೆ ಪತ್ರದಲ್ಲಿ ತಮ್ಮ ಮದುವೆ ಆಮಂತ್ರಣವನ್ನು ತಾವೇ ಖುದ್ದಾಗಿ ಬರೆದು ಪ್ರಿಂಟ್ ಮಾಡಿಸಿದ್ದಾರೆ. ಡಾಲಿ ಧನಂಜಯ್ ಅವರು ಕವಿತೆ, ಹಾಡುಗಳನ್ನು ಅದ್ಭುತವಾಗಿ ಬರೆಯುತ್ತಾರೆ. ಅದೇ ರೀತಿ ತಮ್ಮ ಮದುವೆ ಆಮಂತ್ರಣ ಪತ್ರವನ್ನು ಸಹ ಬಹಳ ವಿಶೇಷವಾಗಿ ಬರೆದಿದ್ದಾರೆ.
ಡಾಲಿ ಧನಂಜಯ್ ಹಾಗೂ ಧನ್ಯತಾ ಮದುವೆ ಮೈಸೂರಿನ ಅರಮನೆ ಮುಂಭಾಗದ ವಸ್ತುಪ್ರದರ್ಶನ ಮೈದಾನದಲ್ಲಿ ಫೆಬ್ರವರಿ 16ರ ಭಾನುವಾರ ಬೆಳಿಗ್ಗೆ 8:30ಕ್ಕೆ ನಡೆಯಲಿದೆ. ಆರತಕ್ಷತೆ ಅದೇ ಮೈಸೂರಿನ ಅರಮನೆ ಮುಂಭಾಗದ ವಸ್ತುಪ್ರದರ್ಶನ ಮೈದಾನದಲ್ಲಿ ಫೆಬ್ರವರಿ 15ರ ಸಂಜೆ 6 ಗಂಟೆಗೆ ನಡೆಯಲಿದೆ.