ಕನ್ನಡದ ಹುಡುಗಿ ನಟಿ ರಶ್ಮಿಕಾ ಮಂದಣ್ಣ ಪ್ಯಾನ್ ಇಂಡಿಯಾ ಸ್ಟಾರ್ ಆಗಿ ಮಿಂಚುತ್ತಿದ್ದಾರೆ. ಕೆಲ ತಿಂಗಳ ಹಿಂದೆ ನಟಿ ರಶ್ಮಿಕಾ ಮಂದಣ್ಣ ಡೀಪ್ ಫೇಕ್ ವಿಡಿಯೋ ಫುಲ್ ವೈರಲ್ ಆಗಿತ್ತು. ಈ ವಿಡಿಯೋ ವಿರುದ್ಧ ರಶ್ಮಿಕಾ ದೂರು ನೀಡಿದ್ರು. ಅಷ್ಟೇ ಅಲ್ಲದೇ ಅಮಿತಾಬ್, ವಿಜಯ್ ದೇವರಕೊಂಡ ಸೇರಿದಂತೆ ಅನೇಕರು ಡೀಪ್ ಫೇಕ್ ವಿಡಿಯೋ ವೈರಲ್ ಮಾಡುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ರು. ರಶ್ಮಿಕಾ ಬಳಿಕ ಆಲಿಯಾ ಭಟ್, ಕಾಜೋಲ್ ಸೇರಿದಂತೆ ಅನೇಕ ನಟಿಯರ ಡೀಪ್ಫೇಕ್ ವಿಡಿಯೋ ಕೂಡ ಸದ್ದು ಮಾಡಿತ್ತು. ಡಿಫ್ ಪೇಕ್ಗೆ ಬಲಿಯಾಗಿ ಸೈಬರ್ ಸುರಕ್ಷತೆ ಬಗ್ಗೆ ಮಾತಾಡಿದ್ದ ರಶ್ಮಿಕಾ ಮಂದಣ್ಣ ಅವರನ್ನೇ ಸರ್ಕಾರ ಸೈಬರ್ ಕ್ರೈಮ್ ಸಮನ್ವಯ ಕೇಂದ್ರದ ರಾಯಭಾರಿಯನ್ನಾಗಿ ನೇಮಕ ಮಾಡಿದೆ.
ನಟಿ ರಶ್ಮಿಕಾ ಮಂದಣ್ಣ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಶೇರ್ ಮಾಡುವ ಮೂಲಕ ಹೊಸ ಜವಾಬ್ದಾರಿ ನಿರ್ವಹಣೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಕೇಂದ್ರ ಗೃಹ ಸಚಿವಾಲಯದ ‘ಭಾರತೀಯ ಸೈಬರ್ ಕ್ರೈಮ್ ಕೋಆರ್ಡಿನೇಶನ್ ಸೆಂಟರ್ (I4C) ಸೈಬರ್ ಸುರಕ್ಷತೆ ಬಗ್ಗೆ ಜಾಗೃತಿ ಮೂಡಿಸುವ ‘ರಾಷ್ಟ್ರೀಯ ರಾಯಭಾರಿ’ ಆಗಿ ರಶ್ಮಿಕಾ ಮಂದಣ್ಣ ಅವರನ್ನು ನೇಮಕ ಮಾಡಲಾಗಿದೆ.
ಕೆಲ ತಿಂಗಳ ಹಿಂದೆ ನನ್ನ ಡೀಪ್ ಫೇಕ್ ವಿಡಿಯೋಗಳು ವೈರಲ್ ಆಗಿತ್ತು. ಈ ಘಟನೆ ಬಳಿಕ ಸೈಬರ್ ಕ್ರೈಮ್ ವಿರುದ್ಧ ನಿಲ್ಲಲ್ಲು ಹಾಗೂ ಜಾಗೃತಿ ಮೂಡಿಸಲು ನಿರ್ಧರಿಸಿದ್ದೆ. ಇದೀಗ ನಾನು ಕೇಂದ್ರ ಸರ್ಕಾರದ ಜೊತೆಗೆ ಗೃಹ ವ್ಯವಹಾರಗಳ ಸಚಿವಾಲಯದ ಅಡಿಯಲ್ಲಿ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿದ್ದೇನೆ ಎಂದು ಹೇಳಲು ನನಗೆ ಸಂತೋಷವಾಗಿದೆ ಎಂದು ರಶ್ಮಿಕಾ ಹೇಳಿದ್ದಾರೆ.
ಸೈಬರ್ ಕ್ರಿಮಿನಲ್ ಗಳು ಜನರನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನಾನು ಮಾತ್ರ ಎಚ್ಚರವಾಗಿದ್ರೆ ಸಾಲದು ನಮ್ಮನ್ನು ನಾವು ರಕ್ಷಿಸಿಕೊಳ್ಳಬೇಕು ಮತ್ತು ಸೈಬರ್ ಅಪರಾಧಗಳನ್ನು ತಡೆಯುವ ಕೆಲಸ ಮಾಡ್ಬೇಕು. ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ ಬ್ರಾಂಡ್ ಅಂಬಾಸಿಡರ್ ಆಗಿ ನಾನು ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸುತ್ತೇನೆ. ಇಂತಹ ಅಪರಾಧದಿಂದ ದೇಶವನ್ನು ರಕ್ಷಿಸಬೇಕು ಎಂದು ರಶ್ಮಿಕಾ ಹೇಳಿದ್ದಾರೆ.