ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲನೇ ಆರೋಪಿ ಪವಿತ್ರಾಗೌಡ ಜಾಮೀನು ಅರ್ಜಿಯನ್ನು ಬೆಂಗಳೂರಿನ 57ನೇ ಸಿಸಿಎಚ್ ನ್ಯಾಯಾಲಯ ವಜಾಗೊಳಿಸಿದೆ.
ಈ ಮೂಲಕ ಪವಿತ್ರಾಗೌಡಗೆ ಜೈಲೇಗತಿಯಾಗಿದೆ. ಪವಿತ್ರಗೌಡ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಇಂದು ಈ ಕುರಿತು ಆದೇಶ ಪ್ರಕಟಿಸಿದ್ದು ಪವಿತ್ರಾಗೌಡ ಜಾಮೀನು ಅರ್ಜಿ ವಜಾಗೊಳಿಸಿ ಆದೇಶಿದೆ.
ಪ್ರಕರಣದ ಎ 13 ದೀಪಕ್, ಎ8 ರವಿಶಂಕರ್ ಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಹಾಗೆಯೇ ಎ11 ನಾಗರಾಜು, ಎ12 ಲಕ್ಷ್ಮಣ್ ಜಾಮೀನು ಅರ್ಜಿ ವಜಾಗೊಳಿಸಿದೆ.