ಸೀತಾರಾಮಂ ಸಿನಿಮಾದ ಮೂಲಕ ಪಡ್ಡೆ ಹುಡುಗರ ಮನಸ್ಸು ಕದ್ದ ಮೃಣಾಲ್ ಠಾಕೂರ್ ಈಗ ಡೇಟಿಂಗ್ ವಿಷಯವಾಗಿ ಸುದ್ದಿಯಲ್ಲಿದ್ದಾರೆ. ದೀಪಿಕಾಗೆಗೆ ಹ್ರೈಯಾನ್ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದ ಬಾಲಿವುಡ್ ನಟ ಸಿದ್ಧಾಂತ್ ಚೇತುರ್ವೇದಿ ಜೊತೆಯಲ್ಲಿ ಮೃಣಾಲ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ಸುದ್ದಿ ಬಿ ಟೌನ್ ನ ಅಂಗಳದಲ್ಲಿ ಕೇಳಿ ಬರುತ್ತಿದೆ.
ಇತ್ತೀಚಿಗೆ ರೆಸ್ಟೋರೆಂಟ್ ವೊಂದರಲ್ಲಿ ಡಿನ್ನರ್ ಮುಗಿಸಿ ಜೊತೆಯಾಗಿ ಕೈ ಕೈ ಹಿಡಿದು ಕಾಣಿಸಿಕೊಂಡಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ. ನಿಜಕ್ಕೂ ಈ ಜೋಡಿ ಡೇಟಿಂಗ್ ಮಾಡ್ತಿರೋದು ನಿಜಾನಾ ಎಂಬುವುದು ಅವರೇ ಸ್ಪಷ್ಟ ಪಡಿಸಬೇಕಿದೆ.
ಇತ್ತೀಚಿಗಷ್ಟೇ ವಿಜಯ್ ದೇವರಕೊಂಡ ಜೊತೆ ಫ್ಯಾಮಿಲಿ ಸ್ಟಾರ್ ಸಿನಿಮಾದಲ್ಲಿ ಮೃಣಾಲ್ ಕಾಣಿಸಿಕೊಂಡಿದ್ರು. ಸದ್ಯ ಈ ಬ್ಯೂಟಿ ಟಾಲಿವುಡ್ ಹಾಗೂ ಬಾಲಿವುಡ್ ನಲ್ಲಿ ಬಹು ಬೇಡಿಕೆಯ ನಟಿಯಾಗಿದ್ದಾರೆ. ಸಂಜಯ್ ಲೀಲಾ ಬನ್ಸಾಲಿ ಅವರ ಹೊಸ ಚಿತ್ರದಲ್ಲಿ ನಾಯಕಿಯಾಗಿದ್ದಾರೆ ಮೃಣಲ್ ಠಾಕೂರ್.