ನಟ ನಾಗ ಚೈತನ್ಯ ಹಾಗೂ ಶೋಭಿತಾ ಧೂಳಿಪಾಲ ಡಿಸೆಂಬರ್ 4 ರಂದು ಹೈದರಾಬಾದ್ ನ ಅನ್ನಪೂರ್ಣ ಸ್ಟುಡಿಯೋದಲ್ಲಿ ತಮ್ಮ ಪ್ರೀತಿಪಾತ್ರರ ಸಮ್ಮುಖದಲ್ಲಿ ವಿವಾಹವಾದರು. ವಿವಾಹವಾದ ನಂತರ ಈ ದಂಪತಿಗಳು ಮೊದಲ ಬಾರಿಗೆ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಂಡಿದ್ದಾರೆ.
ನಾಗಚೈತನ್ಯ, ಶೋಭಿತಾ ದಂಪತಿ ಮದುವೆಯ ಬಳಿಕ ಶುಕ್ರವಾರ ಆಂಧ್ರಪ್ರದೇಶದ ಶ್ರೀಶೈಲಂ ದೇವಸ್ಥಾನಕ್ಕೆ ತೆರಳಿ, ಶ್ರೀ ಭ್ರಮರಾಂಬ ಮಲ್ಲಿಕಾರ್ಜುನ ಸ್ವಾಮಿಯ ಆಶೀರ್ವಾದ ಪಡೆದರು. ಇವರ ಜೊತೆ ನಾಗರ್ಜುನ ಸಹ ಇದ್ದರು. ಚೈತನ್ಯ ಸಾಂಪ್ರದಾಯಿಕ ಬಿಳಿ ಪಂಚೆ ಹಾಗೂ ಶೋಭಿತಾ ಹಳದಿ ಸೀರೆಯನ್ನು ಧರಿಸಿ, ದೇವಸ್ಥಾನಕ್ಕೆ ಹೋಗುತ್ತಿರುವ ವಿಡಿಯೋ ಫುಲ್ ವೈರಲ್ ಆಗಿದೆ.