- ನಟಿ ಸನ್ನಿ ಲಿಯೋನ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
- 43ನೇ ವರ್ಷಕ್ಕೆ ಕಾಲಿಟ್ಟ ನಟಿ ಸನ್ನಿ ಲಿಯೋನ್ ಬಹುಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.
ನಟಿ ಸನ್ನಿ ಲಿಯೋನ್ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಅನೇಕರು ನೆಚ್ಚಿನ ನಟಿಗೆ ಶುಭಾಶಯಗಳ ಮಹಾಪೂರ ಹರಿಸುತ್ತಿದ್ದಾರೆ. 43ನೇ ವರ್ಷಕ್ಕೆ ಕಾಲಿಟ್ಟ ನಟಿ ಸನ್ನಿ ಲಿಯೋನ್ ಬಹುಸಂಖ್ಯೆಯ ಅಭಿಮಾನಿಗಳನ್ನು ಹೊಂದಿದ್ದಾರೆ.
ಇನ್ನು, ನೆಚ್ಚಿನ ನಟಿಯ ಹುಟ್ಟುಹಬ್ಬದ ನಿಮಿತ್ತ ಫ್ಯಾನ್ಸ್ ನಟಿಯ ಹೊಸ ಫೋಟೋಗಳನ್ನು ಶೇರ್ ಮಾಡಿಕೊಳ್ಳುತ್ತಾ “ಹ್ಯಾಪಿ ಬರ್ತ್ ಡೇ ಹಾಟ್ ಬ್ಯೂಟಿ”, “ನನ್ನ ಕನಸ್ಸಿನ ರಾಣಿ” ಅಂತ ಕಾಮೆಂಟ್ ಮಾಡುವ ಮೂಲಕ ಬರ್ತ್ ಡೇಗೆ ವಿಶ್ ಮಾಡುತ್ತಿದ್ದಾರೆ.
ಮೊನ್ನೆಯಷ್ಟೇ ನಟಿ ಸನ್ನಿ ಲಿಯೋನ್ ಕಾಸರಗೋಡಿನ ರಸ್ತೆಗಳಲ್ಲಿ ಕಾಣಿಸಿಕೊಂಡಿದ್ದರು. ನೆಚ್ಚಿನ ನಟಿಯನ್ನು ಕಾಣಲು ಅಭಿಮಾನಿಗಳು ಮುಗಿ ಬಿದ್ದಿದ್ದರು. ಸನ್ನಿಲಿಯೋನ್ ಕಾಸರಗೋಡಿನ ಸೀತಂಗೋಳಿ ಸಮೀಪದ ಶೇಣಿ ಎಂಬಲ್ಲಿ ಹಿಂದಿ ಸಿನಿಮಾ ಶೂಟಿಂಗ್ ನಡೆಯುತ್ತಿದ್ದು. ಹೀಗಾಗಿ ಆಕೆ ಕಾಸರಗೋಡಿಗೆ ಬಂದಿದ್ದಾರೆ. ಅವರು ಕಾಸರಗೋಡಿಗೆ ಬಂದ ಫೋಟೋಗಳು ಸಿಕ್ಕಾಪಟ್ಟೆ ವೈರಲ್ ಆಗಿದ್ದವು.