ಹೈದರಾಬಾದ್ : ಟಾಲಿವುಡ್ನ ನಟ ಅಲ್ಲು ಅರ್ಜುನ್ ಅವರು ತಮ್ಮ ‘ಪುಷ್ಪ 2, ದಿ ರೂಲ್’ ಚಿತ್ರದ ಪ್ರೀಮಿಯರ್ ಶೋಗೆ ಆಗಮಿಸಿದಾಗ, ಹೈದರಾಬಾದ್ ಚಿತ್ರಮಂದಿರದ ಹೊರಗೆ ಕಾಲ್ತುಳಿತ ಉಂಟಾಗಿದೆ. ಇನ್ನು ದುರ್ಘಟನೆಯಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, ಸದ್ಯ ನಟ ಅಲ್ಲು ಅರ್ಜುನ್ ವಿರುದ್ಧ ಎಫ್ಐಆರ್ ದಾಖಲಾಗಿದೆ.
ನಟನಲ್ಲದೆ, ಜನಸಂದಣಿಯನ್ನು ನಿರ್ವಹಿಸಲು ಭದ್ರತೆಗೆ ಸಂಬಂಧಿಸಿದಂತೆ ಯಾವುದೇ ಹೆಚ್ಚುವರಿ ನಿಬಂಧನೆಗಳನ್ನು ಮಾಡದ ಕಾರಣ ಸಂಧ್ಯಾ ಚಿತ್ರಮಂದಿರದ ಆಡಳಿತ ಮಂಡಳಿಯ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು.
ಈ ಬಗ್ಗೆ ಹೇಳಿಕೆ ನೀಡಿರುವ ಹೈದರಾಬಾದ್ ಪೊಲೀಸ್ ಆಯುಕ್ತ ಸಿ.ವಿ.ಆನಂದ್, “ಚಿತ್ರಮಂದಿರಕ್ಕೆ ಭೇಟಿ ನೀಡುವ ಬಗ್ಗೆ ಥಿಯೇಟರ್ ಮ್ಯಾನೇಜ್ಮೆಂಟ್ ಅಥವಾ ನಟರ ತಂಡದಿಂದ ಯಾವುದೇ ಸೂಚನೆ ಬಂದಿಲ್ಲ” ಎಂದು ಹೇಳಿದ್ದಾರೆ.